
ನವದೆಹಲಿ: ಕ್ರೌರ್ಯದ ಆಧಾರದ ಮೇಲೆ ವಿಚ್ಛೇದನ ಬಯಸಿ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಸಲ್ಲಿಸಿದ ಮನವಿಯ ಮೇಲೆ ಸುಪ್ರೀಂ ಕೋರ್ಟ್ ಸೋಮವಾರ ಅವರ ಪತ್ನಿ ಪಾಯಲ್ ಅಬ್ದುಲ್ಲಾ ಅವರಿಂದ ಪ್ರತಿಕ್ರಿಯೆ ಕೇಳಿದೆ.
ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರನ್ನೊಳಗೊಂಡ ನ್ಯಾಯ ಪೀಠ, ಪಾಯಲ್ ಅಬ್ದುಲ್ಲಾ ಅವರಿಗೆ ನೋಟಿಸ್ ಜಾರಿಗೊಳಿಸಿದ್ದು, ಆರು ವಾರಗಳಲ್ಲಿ ಪ್ರತಿಕ್ರಿಯೆಯನ್ನು ಕೇಳಿದೆ. ಆರಂಭದಲ್ಲಿ, ಒಮರ್ ಅಬ್ದುಲ್ಲಾ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಕಳೆದ 15 ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿರುವುದರಿಂದ ವಿವಾಹವು 'ಸತ್ತಿದೆ' ಎಂದು ಹೇಳಿದರು.
ಡಿಸೆಂಬರ್ 12, 2023 ರಂದು ಒಮರ್ ಅಬ್ದುಲ್ಲಾ ವಿಚ್ಛೇದನ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಮಾಜಿ ಮುಖ್ಯಮಂತ್ರಿ ಅಬ್ದುಲ್ಲಾ ವಿಚ್ಚೇದನಕ್ಕೆ ಅನುಮತಿ ನೀಡಲು ನಿರಾಕರಿಸಿದ 2016 ರ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.
Advertisement