Video: Anjaneri Waterfall ವೀಕ್ಷಣೆಗೆ ತೆರಳಿ ಅಪಾಯಕ್ಕೆ ಸಿಲುಕಿದ ಪ್ರವಾಸಿಗರು; ಮಾನವ ಸರಪಳಿ ನಿರ್ಮಿಸಿ ರಕ್ಷಣೆ

ಪ್ರವಾಸಿಗರು ನಿಂತಿದ್ದ ಪ್ರದೇಶಕ್ಕೂ ಪ್ರವಾಹದ ನೀರು ನುಗ್ಗಿದ್ದು, ನೋಡ ನೋಡುತ್ತಲೇ ನೀರಿನ ಪ್ರವಾಹ ಹೆಚ್ಚಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ ತಂಡ ಕೂಡಲೇ ಸ್ಥಳಕ್ಕಾಗಮಿಸಿ ತಮ್ಮ ಬುದ್ದಿವಂತಿಕೆ ಬಳಸಿ ಮಾನವ ಸರಪಳಿ ರಚಿಸಿ ಸುಮಾರು 6 ಗಂಟೆಗಳ ಪರಿಶ್ರಮದ ಬಳಿಕ ಎಲ್ಲ ಪ್ರವಾಸಿಗರನ್ನು ರಕ್ಷಿಸಿದ್ದಾರೆ.
Anjaneri Waterfall Rescue ops
ಅಂಜನೇರಿ ಜಲಪಾತ ವೀಕ್ಷಣೆಗೆ ತೆರಳಿದ್ದ ಪ್ರವಾಸಿಗರು
Updated on

ಮುಂಬೈ: ನೆರೆಯ ಮಹಾರಾಷ್ಟ್ರದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಪ್ರಖ್ಯಾತ ಅಂಜನೇರಿ ಜಲಪಾತ ವೀಕ್ಷಣೆಗೆ ತೆರಳಿದ ಪ್ರವಾಸಿಗರು ದಿಢೀರ್ ಪ್ರವಾಹದಿಂದಾಗಿ ಅಪಾಯಕ್ಕೆ ಸಿಲುಕಿದ ವಿಡಿಯೋ ವೈರಲ್ ಆಗುತ್ತಿದೆ.

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿರುವ ಅಂಜನೇರಿ ಜಲಪಾತ ಪ್ರವಾಸಿ ತಾಣದಲ್ಲಿ ಈ ಘಟನೆ ನಡೆದಿದ್ದು, ಬರೊಬ್ಬರಿ 6 ಗಂಟೆಗಳ ಕಾರ್ಯಾಚರಣೆ ನಡೆಸಿ ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ.

Anjaneri Waterfall Rescue ops
ಮಹಾರಾಷ್ಟ್ರ: ಪ್ರವಾಸಿಗರ ಎದುರೇ ಒಂದೇ ಕುಟುಂಬದ ಐವರು ಜಲಸಮಾಧಿ, ಭಯಾನಕ Video

ಸುಮಾರು 15ಕ್ಕಿಂತ ಹೆಚ್ಚು ಪ್ರವಾಸಿಗರು ಅಂಜನೇರಿ ಜಲಪಾತ ವೀಕ್ಷಣೆಗೆ ತೆರಳಿದ್ದರು. ಈ ವೇಳೆ ದಿಢೀರ್ ಭಾರಿ ಮಳೆ ಸುರಿದಿದ್ದು, ಮಳೆ ಸುರಿಯುತ್ತಲೇ ಜಲಪಾಕ ಉಕ್ಕಿ ಹರಿದಿದೆ. ಪರಿಣಾಮ ಪ್ರವಾಸಿಗರು ನಿಂತಿದ್ದ ಪ್ರದೇಶಕ್ಕೂ ಪ್ರವಾಹದ ನೀರು ನುಗ್ಗಿದ್ದು, ನೋಡ ನೋಡುತ್ತಲೇ ನೀರಿನ ಪ್ರವಾಹ ಹೆಚ್ಚಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ ತಂಡ ಕೂಡಲೇ ಸ್ಥಳಕ್ಕಾಗಮಿಸಿ ತಮ್ಮ ಬುದ್ದಿವಂತಿಕೆ ಬಳಸಿ ಮಾನವ ಸರಪಳಿ ರಚಿಸಿ ಸುಮಾರು 6 ಗಂಟೆಗಳ ಪರಿಶ್ರಮದ ಬಳಿಕ ಎಲ್ಲ ಪ್ರವಾಸಿಗರನ್ನು ರಕ್ಷಿಸಿದ್ದಾರೆ.

ಕೂಡಲೇ ಅಲ್ಲಿದ್ದ ಪ್ರವಾಸಿಗರು ತಾವೇ ಮಾನವ ಸರಪಳಿ ನಿರ್ಮಿಸಿಕೊಂಡು ನಿಧಾನವಾಗಿ ಮೆಟ್ಟಿಲುಗಳ ಇಳಿದು ಪಕ್ಕದ ಸುರಕ್ಷಿತ ಜಾಗಕ್ಕೆ ಬಂದಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಅರಣ್ಯಾಧಿಕಾರಿಗಳು ಪ್ರವಾಸಿಗರಿಗೆ ಮಾನವ ಸರಪಳಿ ಮಾರ್ಗದರ್ಶನ ನೀಡಿ ಸುಮಾರು 6 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಪ್ರವಾಸಿಗರನ್ನು ಸುರಕ್ಷಿತವಾಗಿ ಕೆಳಗೆ ಕರೆ ತಂದಿದ್ದಾರೆ. ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಅರಣ್ಯ ಇಲಾಖೆಯ ರಕ್ಷಣಾ ತಂಡದ ಕ್ಷಿಪ್ರ ಮತ್ತು ಸಂಘಟಿತ ಪ್ರತಿಕ್ರಿಯೆಯು ಸಂಭಾವ್ಯ ಸಾವುನೋವುಗಳನ್ನು ತಡೆದಿದ್ದು, ವ್ಯಾಪಕ ಶ್ಲಾಘನೆಗೆ ಪಾತ್ರವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com