2041ರ ವೇಳೆಗೆ ಅಸ್ಸಾಂ ಮುಸ್ಲಿಂ ಬಹುಸಂಖ್ಯಾತ ರಾಜ್ಯವಾಗಲಿದೆ: ಸಿಎಂ ಹಿಮಂತ ಬಿಸ್ವಾ ಶರ್ಮಾ

ರಾಜ್ಯದಲ್ಲಿ ಪ್ರತಿ 10 ವರ್ಷಗಳಿಗೊಮ್ಮೆ ಮುಸ್ಲಿಂ ಜನಸಂಖ್ಯೆಯು ಸುಮಾರು 30 ಪ್ರತಿಶತದಷ್ಟು ಹೆಚ್ಚುತ್ತಿದೆ ಎಂದು ಹಿಮಂತ ಬಿಸ್ವಾ ಶರ್ಮಾ ಪ್ರತಿಪಾದಿಸಿದರು.
Himanta Biswa Sarma
ಹಿಮಂತ್‌ ಬಿಸ್ವಾ ಶರ್ಮಾPhoto | X @BJP4India
Updated on: 

ಮುಂಬರುವ ಕೆಲವು ವರ್ಷಗಳಲ್ಲಿ ಅಸ್ಸಾಂನಲ್ಲಿ ಮುಸ್ಲಿಮರ ಜನಸಂಖ್ಯೆಯು ಸಾಕಷ್ಟು ಹೆಚ್ಚಾಗಲಿದೆ. 2041ರ ವೇಳೆಗೆ ಅಸ್ಸಾಂ ಮುಸ್ಲಿಂ ಬಹುಸಂಖ್ಯಾತ ರಾಜ್ಯವಾಗಲಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ದೊಡ್ಡ ಹೇಳಿಕೆ ನೀಡಿದ್ದಾರೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅಂಕಿಅಂಶಗಳ ಮಾದರಿಗಳನ್ನು ಪ್ರಸ್ತುತಪಡಿಸಿದರು. ರಾಜ್ಯದಲ್ಲಿ ಪ್ರತಿ 10 ವರ್ಷಗಳಿಗೊಮ್ಮೆ ಮುಸ್ಲಿಂ ಜನಸಂಖ್ಯೆಯು ಸುಮಾರು 30 ಪ್ರತಿಶತದಷ್ಟು ಹೆಚ್ಚುತ್ತಿದೆ ಎಂದು ಅವರು ಪ್ರತಿಪಾದಿಸಿದರು. ಇದರ ಪ್ರಕಾರ 2041ರ ವೇಳೆಗೆ ಅಸ್ಸಾಂನಲ್ಲಿ ಮುಸ್ಲಿಮರು ಬಹುಸಂಖ್ಯಾತರಾಗುತ್ತಾರೆ ಎಂದು ಹೇಳಿದರು.

ಅಂಕಿಅಂಶಗಳ ಮಾದರಿಗಳನ್ನು ಉಲ್ಲೇಖಿಸಿ, ಮುಸ್ಲಿಮರು ಈಗ ಅಸ್ಸಾಂನ ಜನಸಂಖ್ಯೆಯ 40 ಪ್ರತಿಶತದಷ್ಟಿದ್ದಾರೆ ಎಂದು ಹೇಳಿದರು. ಇದು ವಾಸ್ತವ, ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಒತ್ತಿ ಹೇಳಿದರು. ಪ್ರತಿ ಹತ್ತು ವರ್ಷಗಳಿಗೊಮ್ಮೆ ಹಿಂದೂಗಳ ಜನಸಂಖ್ಯೆಯು ಕೇವಲ 16 ಪ್ರತಿಶತದಷ್ಟು ಮಾತ್ರ ಹೆಚ್ಚುತ್ತಿದೆ ಎಂದು ಅವರು ಪ್ರತಿಪಾದಿಸಿದರು. ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಮುಸ್ಲಿಂ ಸಮುದಾಯದ ಜನಸಂಖ್ಯೆಯ ಬೆಳವಣಿಗೆಯನ್ನು ಕಡಿಮೆ ಮಾಡಲು ತಮ್ಮ ಸರ್ಕಾರ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com