A handwritten boarding pass issued by the Indigo Airlines after their services were affected by the MIcrosoft outage.
ಇಂಡಿಗೋ ಏರ್‌ಲೈನ್ಸ್ ನೀಡಿದ ಕೈಬರಹದ ಬೋರ್ಡಿಂಗ್ ಪಾಸ್, ಮೈಕ್ರೋಸಾಫ್ಟ್ ಸ್ಥಗಿತದಿಂದ ಅವರ ಸೇವೆಗಳ ಮೇಲೆ ಪರಿಣಾಮ ಬೀರಿತು.

ಏರ್ ಲೈನ್ಸ್, ಬ್ಯಾಂಕಿಂಗ್ ಗೂ ತಟ್ಟಿದ ಮೈಕ್ರೋಸಾಫ್ಟ್ ತಾಂತ್ರಿಕ ಸಮಸ್ಯೆ!

ಹಲವೆಡೆ ವಲಸೆ ಕಾರ್ಯವಿಧಾನದ ಮೇಲೆಯೂ ಮೈಕ್ರೋಸಾಫ್ಟ್ ನ ಸ್ಥಗಿತವು ಪರಿಣಾಮ ಉಂಟು ಮಾಡಿದ್ದು, ಅವರನ್ನು ನಿಗದಿತ ಗಮ್ಯಸ್ಥಾನಕ್ಕೆ ಕರೆದೊಯ್ಯಲು ನಾವು ಫೆರಿ ವಿಮಾನವನ್ನು ವ್ಯವಸ್ಥೆಗೊಳಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Published on

ಮೈಕ್ರೋಸಾಫ್ಟ್ ತಾಂತ್ರಿಕ ಸಮಸ್ಯೆ ಏರ್ ಲೈನ್ಸ್, ಬ್ಯಾಂಕಿಂಗ್ ಸೇರಿದಂತೆ ಭಾರತದಲ್ಲಿ ಹಲವು ಕ್ಷೇತ್ರಗಳ ಮೇಲೆ ಪರಿಣಾಮ ಬೀರಿದೆ.

ಹೊಸ ಕ್ರೌಡ್‌ಸ್ಟ್ರೈಕ್ (ಸೈಬರ್ ಸೆಕ್ಯುರಿಟಿ ಸಾಫ್ಟ್‌ವೇರ್ ಸಂಸ್ಥೆ) ಅಪ್‌ಡೇಟ್ ಸ್ಥಗಿತಕ್ಕೆ ಕಾರಣ ಎಂದು ಉಲ್ಲೇಖಿಸಲಾಗಿದೆ.

ಏರ್ ಲೈನ್ಸ್ ಮೇಲೆ ಪರಿಣಾಮ

ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಮೈಕ್ರೋಸಾಫ್ಟ್ ತಾಂತ್ರಿಕ ಸಮಸ್ಯೆ ತಟ್ಟಿದ್ದು ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಉಂಟಾಗಿದೆ.

ಚೆಕ್ ಇನ್, ಬೋರ್ಡಿಂಗ್ ಗಳಲ್ಲಿ ವಿಳಂಬ ಉಂಟಾಗಿ, ಹಲವು ವಿಮಾನಗಳು ರದ್ದುಗೊಂಡವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೈಕ್ರೋಸಾಫ್ಟ್ ಸ್ಥಗಿತವು ಹಲವಾರು ವಿಮಾನಯಾನ ಸಂಸ್ಥೆಗಳ ಮೇಲೆ ಪರಿಣಾಮ ಬೀರಿದೆ. ದೆಹಲಿ, ಬೆಂಗಳೂರು ಮತ್ತು ಮುಂಬೈ ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು ಅಡ್ಡಿಪಡಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೈಕ್ರೋಸಾಫ್ಟ್ ನ ಸಮಸ್ಯೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ನಿನ್ನೆ ರಾತ್ರಿ ರಷ್ಯಾದ ಕ್ರಾಸ್ನೊಯಾರ್ಸ್ಕ್‌ಗೆ ತಿರುಗುಸಬೇಕಾಯಿತು.

ಈ ವಿಷಯದ ಕುರಿತು ಮಾತನಾಡಿದ ಏರ್ ಇಂಡಿಯಾ ವಕ್ತಾರರು, ಮೈಕ್ರೋಸಾಫ್ಟ್ ಸ್ಥಗಿತವು ವಿಮಾನಯಾನ ವ್ಯವಸ್ಥೆಗಳ ಮೇಲೆ ಪರಿಣಾಮ ಬೀರಿದೆ ಮತ್ತು ಪ್ರಯಾಣಿಕರನ್ನು ಸಾಧ್ಯವಾದಷ್ಟು ಬೇಗ ಸ್ಥಳಾಂತರಿಸುವುದು ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.

ಏತನ್ಮಧ್ಯೆ, ದೆಹಲಿ ವಿಮಾನ ನಿಲ್ದಾಣದಲ್ಲಿ, ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ಕೈಬರಹದ ಬೋರ್ಡಿಂಗ್ ಪಾಸ್‌ಗಳನ್ನು ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಲವೆಡೆ ವಲಸೆ ಕಾರ್ಯವಿಧಾನದ ಮೇಲೆಯೂ ಮೈಕ್ರೋಸಾಫ್ಟ್ ನ ಸ್ಥಗಿತವು ಪರಿಣಾಮ ಉಂಟು ಮಾಡಿದ್ದು, ಅವರನ್ನು ನಿಗದಿತ ಗಮ್ಯಸ್ಥಾನಕ್ಕೆ ಕರೆದೊಯ್ಯಲು ನಾವು ಫೆರಿ ವಿಮಾನವನ್ನು ವ್ಯವಸ್ಥೆಗೊಳಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

A handwritten boarding pass issued by the Indigo Airlines after their services were affected by the MIcrosoft outage.
ವಿಶ್ವಾದ್ಯಂತ Microsoft ತಾಂತ್ರಿಕ ಸಮಸ್ಯೆ: ಏರ್‏ಲೈನ್ಸ್, ಬ್ಯಾಂಕ್ಸ್, ಇತರೆಡೆಗಳಲ್ಲಿ ಬಳಕೆದಾರರ ಪರದಾಟ!

ಬ್ಯಾಂಕಿಂಗ್

ಮಾಧ್ಯಮ ವರದಿಗಳ ಪ್ರಕಾರ, ಕೆಲವು ಬಳಕೆದಾರರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಐಸಿಐಸಿಐ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್‌ಗಳ ಆನ್‌ಲೈನ್ ಸೇವೆಗಳಲ್ಲಿ ಅಡೆತಡೆಗಳ ಬಗ್ಗೆ ದೂರು ನೀಡಿದ್ದಾರೆ.

ಆದಾಗ್ಯೂ, ಜಾಗತಿಕ ನಿಲುಗಡೆಯಿಂದ ತಮ್ಮ ವ್ಯವಸ್ಥೆಗಳು ಪರಿಣಾಮ ಬೀರುವುದಿಲ್ಲ ಎಂದು ಎಸ್‌ಬಿಐ ಸ್ಪಷ್ಟಪಡಿಸಿದೆ.

ಜಾಗತಿಕ ಸ್ಥಗಿತದ ಪರಿಣಾಮದ ಬಗ್ಗೆ ಕೇಳಿದಾಗ, "ನಮ್ಮ ವ್ಯವಸ್ಥೆ ಚೆನ್ನಾಗಿವೆ" ಎಂದು SBI ಅಧ್ಯಕ್ಷ ದಿನೇಶ್ ಖಾರಾ ಪಿಟಿಐಗೆ ತಿಳಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com