
ನವದೆಹಲಿ: ಮೈಕ್ರೋಸಾಫ್ಟ್ ನ ತಾಂತ್ರಿಕ ಸಮಸ್ಯೆಯಿಂದಾಗಿ ಅಸ್ತವ್ಯಸ್ತಗೊಂಡಿದ್ದ ವೈಮಾನಿಕ ವ್ಯವಸ್ಥೆ ಸಹಜ ಸ್ಥಿತಿಗೆ ಮರಳಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಶನಿವಾರ ಬೆಳಿಗ್ಗೆ 3 ಗಂಟೆಯಿಂದ ವಿಮಾನ ವ್ಯವಸ್ಥೆಗಳು ಸಹಜವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಪ್ರಯಾಣಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.
ನೆನ್ನೆ (ಶುಕ್ರವಾರ) ಸಂಭವಿಸಿದ ಅವ್ಯವಸ್ಥೆಯಿಂದಾಗಿ ಕೆಲವು ಬ್ಯಾಕ್ ಲಾಗ್ ಗಳಿವೆ, ಅವುಗಳನ್ನು ಕ್ರಮೇಣ ತೆರವುಗೊಳಿಸಲಾಗುತ್ತಿದೆ, ಮಧ್ಯಾಹ್ನದ ವೇಳೆಗೆ ಎಲ್ಲಾ ಸಮಸ್ಯೆಗಳೂ ಬಗೆಹರಿಯಲಿದೆ ಎಂದು ಸಚಿವಾಲಯ ಮಾಹಿತಿ ಹಂಚಿಕೊಂಡಿದೆ.
ಮೈಕ್ರೋಸಾಫ್ಟ್ ನ ತಾಂತ್ರಿಕ ದೋಷದಿಂದಾಗಿ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 55 ವಿಮಾನಗಳು ರದ್ದುಗೊಂಡಿದ್ದವು. ಹಲವು ವಿಮಾನಗಳ ಟೇಕ್ ಆಫ್ ವಿಳಂಬವಾಗಿತ್ತು. ದೆಹಲಿ ವಿಮಾನ ನಿಲ್ದಾಣದಲ್ಲಿ, ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ಕೈಬರಹದ ಬೋರ್ಡಿಂಗ್ ಪಾಸ್‌ಗಳನ್ನು ನೀಡಿತ್ತು.
Advertisement