ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

Kerala: ಮಲಪ್ಪುರಂ ಬಾಲಕನಿಗೆ ನಿಫಾ ವೈರಸ್ ಸೋಂಕು ಶಂಕೆ; ಆರೋಗ್ಯ ಸಚಿವೆ ಉನ್ನತ ಮಟ್ಟದ ಸಭೆ

ಉತ್ತರ ಮಲಪ್ಪುರಂ ಜಿಲ್ಲೆಯಲ್ಲಿ ನಿಫಾ ವೈರಾಣು ಸೋಂಕು ಕಾಣಿಸಿಕೊಂಡಿರುವ ಶಂಕೆ ಹಿನ್ನೆಲೆಯಲ್ಲಿ ತುರ್ತು ಸಭೆ ನಡೆಸಿ ಆರೋಗ್ಯ ರಕ್ಷಣೆ ಕೈಗೊಳ್ಳುವ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿದ್ದಾರೆ.
Published on

ತಿರುವನಂತಪುರ: ಕೇರಳ ರಾಜ್ಯದಲ್ಲಿ ನಿಫಾ ಸೋಂಕು ಹರಡದಂತೆ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಶನಿವಾರ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

ಉತ್ತರ ಮಲಪ್ಪುರಂ ಜಿಲ್ಲೆಯಲ್ಲಿ ನಿಫಾ ವೈರಾಣು ಸೋಂಕು ಕಾಣಿಸಿಕೊಂಡಿರುವ ಶಂಕೆ ಹಿನ್ನೆಲೆಯಲ್ಲಿ ತುರ್ತು ಸಭೆ ನಡೆಸಿ ಆರೋಗ್ಯ ರಕ್ಷಣೆ ಕೈಗೊಳ್ಳುವ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿದ್ದಾರೆ.

ಕೋಝಿಕ್ಕೋಡ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಲಪ್ಪುರಂನ ಬಾಲಕನಿಗೆ ನಿಫಾ ರೋಗಲಕ್ಷಣಗಳಿವೆ ಎಂದು ಶಂಕಿಸಲಾಗಿದ್ದು, ಬಾಲಕನ ರಕ್ತದ ಮಾದರಿಗಳನ್ನು ಪರೀಕ್ಷೆಗಾಗಿ ಕೇಂದ್ರೀಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಪರೀಕ್ಷೆ ವರದಿ ಇನ್ನೂ ಸಿಕ್ಕಿಲ್ಲ. ಆದರೆ ನಿಫಾ ಸೋಂಕಿನ ಶಿಷ್ಠಾಚಾರ ಪ್ರಕಾರವೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಸಾಂದರ್ಭಿಕ ಚಿತ್ರ
ಆತಂಕ ಸೃಷ್ಟಿಸಿರುವ ನಿಫಾ ವೈರಸ್ ಬಗ್ಗೆ ಎಷ್ಟು ಗೊತ್ತು? ಸೋಂಕಿಗೆ ಚಿಕಿತ್ಸೆ ಇಲ್ಲವೇ?

ನಿಫಾ ವೈರಸ್ ತಡೆಗಟ್ಟುವಿಕೆಗೆ ಸಂಬಂಧಿಸಿದಂತೆ ಸರ್ಕಾರದ ಆದೇಶದಂತೆ ರೂಪಿಸಲಾದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (SOP) ಅನುಸರಿಸಲಾಗುತ್ತಿದೆ. ಆರೋಗ್ಯ ಸಚಿವೆ ಶೀಘ್ರದಲ್ಲೇ ಮಲಪ್ಪುರಂಗೆ ಭೇಟಿ ನೀಡಲಿದ್ದಾರೆ.

ಈ ಹಿಂದೆ ನಾಲ್ಕು ಬಾರಿ ಕೇರಳ ರಾಜ್ಯವನ್ನು ಕಾಡಿದ್ದ ನಿಫಾ ವೈರಸ್ ಹಾವಳಿ ತಡೆಗೆ ವಿಶೇಷ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಇತ್ತೀಚೆಗೆ ಪ್ರಕಟಿಸಿತ್ತು.

2018, 2021, ಮತ್ತು 2023 ರಲ್ಲಿ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಮತ್ತು 2019 ರಲ್ಲಿ ಎರ್ನಾಕುಲಂ ಜಿಲ್ಲೆಯಲ್ಲಿ ನಿಫಾ ವೈರಸ್ ವರದಿಯಾಗಿತ್ತು. ಕೋಝಿಕ್ಕೋಡ್, ವಯನಾಡ್, ಇಡುಕ್ಕಿ, ಮಲಪ್ಪುರಂ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ಬಾವಲಿಗಳಲ್ಲಿ ನಿಫಾ ವೈರಸ್ ಪ್ರತಿಕಾಯಗಳಗಳು ಪತ್ತೆಯಾಗಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com