ಅಧಿಕಾರಕ್ಕೆ ಬಂದ್ರೆ ಧಾರಾವಿ ಸ್ಲಂ ಪುನರಾಭಿವೃದ್ಧಿ ಯೋಜನೆಯ ಟೆಂಡರ್ ರದ್ದು: ಉದ್ಧವ್ ಠಾಕ್ರೆ

ಮುಂಬೈಯನ್ನು ಅದಾನಿ ನಗರವನ್ನಾಗಿ ಮಾಡಲು ನಾವು ಬಿಡುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
Uddhav Thackeray
ಉದ್ಧವ್ ಠಾಕ್ರೆonline desk
Updated on

ಮುಂಬೈ: ಮಹಾರಾಷ್ಟ್ರದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಉದ್ಯಮಿ ಗೌತಮ್ ಅದಾನಿ ಅವರ ಸಂಸ್ಥೆಗೆ ನೀಡಲಾದ ಧಾರಾವಿ ಸ್ಲಂ ಪುನರಾಭಿವೃದ್ಧಿ ಯೋಜನೆಯ ಟೆಂಡರ್ ಅನ್ನು ರದ್ದುಗೊಳಿಸಲಾಗುವುದು ಎಂದು ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಶನಿವಾರ ಹೇಳಿದ್ದಾರೆ.

ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಠಾಕ್ರೆ, ಧಾರಾವಿ ನಿವಾಸಿಗಳು ಮತ್ತು ವ್ಯಾಪಾರಿಗಳನ್ನು ಬೇರುಸಹಿತ ಕಿತ್ತುಹಾಕದಂತೆ ತಮ್ಮ ಪಕ್ಷ ನೋಡಿಕೊಳ್ಳುತ್ತದೆ. ಅಲ್ಲಿ ವಾಸಿಸುವ ಜನರಿಗೆ ಆ ಪ್ರದೇಶದಲ್ಲಿಯೇ 500 ಚದರ ಅಡಿಯ ಮನೆಗಳನ್ನು ನೀಡಬೇಕು ಎಂದರು.

ಅಧಿಕಾರಕ್ಕೆ ಬಂದ ನಂತರ ಧಾರಾವಿ ಸ್ಲಂ ಪುನರಾಭಿವೃದ್ಧಿ ಯೋಜನೆಯ ಟೆಂಡರ್ ಅನ್ನು ರದ್ದುಪಡಿಸುತ್ತೇವೆ. ಆದರೆ ಈಗಲೇ ಏಕೆ ಅದನ್ನು ರದ್ದುಗೊಳಿಸಬಾರದು ಎಂಬುದಕ್ಕೆ ಸರ್ಕಾರ ಉತ್ತರ ನೀಡಬೇಕು ಎಂದರು.

Uddhav Thackeray
ಉದ್ಧವ್ ಠಾಕ್ರೆ ನಂಬಿಕೆದ್ರೋಹದ ಬಲಿಪಶು: ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ

ಮುಂಬೈಯನ್ನು ಅದಾನಿ ನಗರವನ್ನಾಗಿ ಮಾಡಲು ನಾವು ಬಿಡುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ, ವಿಶ್ವದ ಅತ್ಯಂತ ದಟ್ಟವಾದ ನಗರ ಪ್ರದೇಶಗಳಲ್ಲೊಂದಾದ ಧಾರಾವಿಯನ್ನು ಪುನರಾಭಿವೃದ್ಧಿ ಮಾಡುವ ಯೋಜನೆಯಲ್ಲಿ ಅದಾನಿ ಗ್ರೂಪ್‌ ಜತೆ ಮಾಡಿಕೊಳ್ಳಲಾದ ಒಪ್ಪಂದದಲ್ಲಿ ನಿರ್ದಿಷ್ಟಪಡಿಸದ ರಿಯಾಯಿತಿಗಳನ್ನು ಹೊರತುಪಡಿಸಿ ಹೆಚ್ಚುವರಿ ವಿನಾಯ್ತಿ ನೀಡಲಾಗಿದೆ ಎಂದು ಠಾಕ್ರೆ ಆರೋಪಿಸಿದರು.

"ನಾವು ಹೆಚ್ಚುವರಿ ರಿಯಾಯಿತಿಗಳನ್ನು ನೀಡುವುದಿಲ್ಲ. ಧಾರಾವಿ ನಿವಾಸಿಗಳಿಗೆ ಯಾವುದು ಒಳ್ಳೆಯದು ಎಂಬುದನ್ನು ನಾವು ನೋಡುತ್ತೇವೆ ಮತ್ತು ಅಗತ್ಯವಿದ್ದರೆ ನಾವು ಹೊಸದಾಗಿ ಟೆಂಡರ್ ಕರೆಯುತ್ತೇವೆ" ಎಂದು ಅವರು ಪ್ರತಿಪಾದಿಸಿದರು.

ಶಿವಸೇನೆ (UBT) ಪ್ರತಿಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ್ ಅಘಾಡಿಯ ಭಾಗವಾಗಿದ್ದು, ಇದರಲ್ಲಿ ಕಾಂಗ್ರೆಸ್ ಮತ್ತು ಶರದ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (SP) ಕೂಡ ಸೇರಿದೆ.

ಅಕ್ಟೋಬರ್‌ನಲ್ಲಿ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com