ಸಂಸತ್ ಬಜೆಟ್ ಅಧಿವೇಶನ: ಮುಂದಿನ 5 ವರ್ಷಗಳ ಕಾಲ ದೇಶಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಿನಿಂದ ಹೋರಾಡಬೇಕು- ಪ್ರಧಾನಿ ಮೋದಿ

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಲೋಕಸಭೆಯಲ್ಲಿ ಮಧ್ಯಾಹ್ನ 1 ಗಂಟೆಗೆ ಹಾಗೂ ರಾಜ್ಯಸಭೆಯಲ್ಲಿ ಮಧ್ಯಾಹ್ನ 2 ಗಂಟೆಗೆ ದೇಶದ ಆರ್ಥಿಕ ಸಮೀಕ್ಷೆ ಮಂಡನೆಯಾಗಲಿದೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ
Updated on

ನವದೆಹಲಿ: ಮಂಗಳವಾರ ಮಂಡನೆಯಾಗಲಿರುವ ಕೇಂದ್ರ ಬಜೆಟ್ ಮುಂದಿನ ಐದು ವರ್ಷಗಳ ಮಾರ್ಗಸೂಚಿಯನ್ನು ರೂಪಿಸಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದು, ಇದೇ ವೇಳೆ ವಿರೋಧ ಪಕ್ಷಗಳ ವಿರುದ್ಧವೂ ಹರಿಹಾಯ್ದಿದ್ದಾರೆ.

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಲೋಕಸಭೆಯಲ್ಲಿ ಮಧ್ಯಾಹ್ನ 1 ಗಂಟೆಗೆ ಹಾಗೂ ರಾಜ್ಯಸಭೆಯಲ್ಲಿ ಮಧ್ಯಾಹ್ನ 2 ಗಂಟೆಗೆ ದೇಶದ ಆರ್ಥಿಕ ಸಮೀಕ್ಷೆ ಮಂಡನೆಯಾಗಲಿದೆ. ಸದನದ ಕಲಾಪ ಆರಂಭಕ್ಕೂ ಮುನ್ನ ಪ್ರಧಾನಿ ಮೋದಿ ಅವಪು ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು.

ಇಂದು ಮೊದಲ ಸೋಮವಾರ, ಈ ಪವಿತ್ರ ದಿನದಂದು ಮಹತ್ವದ ಅಧಿವೇಶನ ಪ್ರಾರಂಭವಾಗುತ್ತಿದೆ. ಶ್ರಾವಣದ ಮೊದಲ ಸೋಮವಾರದಂದು ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ. ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗುತ್ತಿದ್ದು, ಇಡೀ ದೇಶವು ಕಾತುರದಿಂದ ಎದುರು ನೋಡುತ್ತಿದೆ. 60 ವರ್ಷಗಳ ನಂತರ ಮೂರನೇ ಬಾರಿಗೆ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಮತ್ತು ಮೂರನೇ ಬಾರಿಗೆ ಬಜೆಟ್ ಮಂಡಿಸುತ್ತಿರುವುದು ಹೆಮ್ಮೆಯ ವಿಚಾರ ಎಂದು ಹೇಳಿದರು.

ನಾಳೆ ಮಂಡನೆಯಾಗಲಿರುವ ಕೇಂದ್ರ ಬಜೆಟ್ ಮುಂದಿನ ಐದು ವರ್ಷಗಳ ಮಾರ್ಗಸೂಚಿಯನ್ನು ರೂಪಿಸಲಿದೆ. ದೇಶದ ಜನರಿಗೆ ಭರವಸೆಗಳನ್ನು ನೀಡುತ್ತಿದ್ದೇನೆ ಮತ್ತು ಇದನ್ನು ನಾನು ಜಾರಿಗೆ ತರುತ್ತೇನೆ. ಇದು ನಮ್ಮ ಸರ್ಕಾರದ ಧ್ಯೇಯವಾಗಿದೆ. ಈ ಬಜೆಟ್ ಅಮೃತ ಕಾಲಕ್ಕೆ ಮಹತ್ವದ ಬಜೆಟ್ ಆಗಿದೆ. ಇಂದಿನ ಬಜೆಟ್ ನಮ್ಮ ಅಧಿಕಾರದ ಮುಂದಿನ 5 ವರ್ಷಗಳ ದಿಕ್ಕನ್ನು ನಿರ್ಧರಿಸುತ್ತದೆ. ಈ ಬಜೆಟ್ ನಮ್ಮ ವಿಕಸಿತ ಭಾರತದ ಕನಸಿಗೆ ಬುನಾದಿಯಾಗಿದೆ ಎಂದು ತಿಳಿಸಿದರು.

ಪ್ರಧಾನಿ ಮೋದಿ
ಜುಲೈ 23ಕ್ಕೆ ಕೇಂದ್ರ ಬಜೆಟ್ ಮಂಡನೆ: ನಿರುದ್ಯೋಗ, ಹಣದುಬ್ಬರ, ತೆರಿಗೆ ಸುಧಾರಣೆಗೆ ಮೋದಿ 3.0 ಸರ್ಕಾರ ಆದ್ಯತೆ?

ಜನವರಿಯಿಂದ ಇಲ್ಲಿಯವರೆಗೆ ನಾವು ಎಷ್ಟು ಹೋರಾಡಬೇಕೋ ಅಷ್ಟು ಹೋರಾಟ ಮಾಡಿದ್ದೇವೆ, ಆದರೆ, ಈಗ ಆ ಅವಧಿ ಮುಗಿದಿದೆ, ಜನತೆ ತೀರ್ಪು ನೀಡಿದೆ. ಎಲ್ಲಾ ಸಂಸದರು ಪಕ್ಷಗಳನ್ನು ಮೀರಿ ದೇಶಕ್ಕಾಗಿ ತಮ್ಮನ್ನು ತಾವು ಸಮರ್ಪಿಸಿಕೊಳ್ಳುಂತೆ ಮತ್ತು ಮುಂದಿನ 4.5 ವರ್ಷಗಳ ಕಾಲ ಸಂಸತ್ತಿನ ಈ ಗೌರವಾನ್ವಿತ ವೇದಿಕೆಯನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆ. 2029 ರ ಚುನಾವಣಾ ವರ್ಷದಲ್ಲಿ ನೀವು ಯಾವುದೇ ರಾಜಕೀಯ ಆಟ ಆಡಬಹುದು. ಆದರೆ, ಪ್ರಸ್ತುತ ರೈತರು, ಯುವಕರು ಮತ್ತು ದೇಶದ ಸಬಲೀಕರಣಕ್ಕಾಗಿ ಕಾರ್ಯ ನಿರ್ವಹಿಸಿ.

ಸಂಸತ್ತಿನ ಮೊದಲ ಅಧಿವೇಶನದಲ್ಲಿ ದೇಶದ 140 ಕೋಟಿ ಜನರಿಂದ ಬಹುಮತದಿಂದ ಆಯ್ಕೆಯಾಗಿರುವ ಸರ್ಕಾರದ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆದಿರುವುದನ್ನು ನೀವು ನೋಡಿದ್ದೀರಿ. 2.5 ಗಂಟೆಗಳ ಕಾಲ ಪ್ರಧಾನಿಮಂತ್ರಿಗಳ ಧ್ವನಿ ಹತ್ತಿಕ್ಕುವ ಪ್ರಯತ್ನ ಕೂಡ ನಡೆದಿದೆ. ಜನತೆ ನಮ್ಮನ್ನು ದೇಶದ ಕಾರ್ಯಕ್ಕಾಗಿ ಕಳುಹಿಸಿದ್ದಾರೆಯೇ ಹೊರತು ಪಕ್ಷಕ್ಕಾಗಿ ಅಲ್ಲ. ಈ ಸಂಸತ್ತು ದೇಶಕ್ಕಾಗಿ, ಪಕ್ಷಕ್ಕಾಗಿ ಅಲ್ಲ ಎಂದರು.

ಬಜೆಟ್ ಅಧಿವೇಶನವು ಆಗಸ್ಟ್ 12 ರವರೆಗೆ ನಡೆಯಲಿದೆ. ಕೇಂದ್ರವು 90 ವರ್ಷಗಳಷ್ಟು ಹಳೆಯದಾದ ಏರ್‌ಕ್ರಾಫ್ಟ್ ಕಾಯ್ದೆಯನ್ನು ಬದಲಿಸುವುದು ಸೇರಿದಂತೆ ಆರು ಮಸೂದೆಗಳನ್ನು ಮಂಡಿಸುವ ನಿರೀಕ್ಷೆಯಿದೆ. ಜಮ್ಮು ಮತ್ತು ಕಾಶ್ಮೀರದ ಬಜೆಟ್‌ಗೆ ಸಂಸತ್ತಿನ ಅನುಮೋದನೆ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಿದ್ದು, ಮಂಗಳವಾರ (ಜುಲೈ. 23) ಬಜೆಟ್ ಮಂಡಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com