
ಕೋಲ್ಕತ್ತಾ: ಕೋಲ್ಕತ್ತಾವನ್ನು ಬಾಂಗ್ಲಾದೇಶದ ರಾಜಧಾನಿ ಢಾಕಾದೊಂದಿಗೆ ಸಂಪರ್ಕಿಸುವ ಮೈತ್ರಿ ಎಕ್ಸ್‌ಪ್ರೆಸ್ ರೈಲು ಸೇವೆ ಮಂಗಳವಾರದವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಪೂರ್ವ ರೈಲ್ವೆಯು ಕಾರ್ಯಾಚರಣೆಯ ಕಾರಣಗಳನ್ನು ಉಲ್ಲೇಖಿಸಿ ತಿಳಿಸಿದೆ.
ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ವಿರೋಧಿಸಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಯ ಮಧ್ಯೆ ರೈಲ್ವೆ ಇಲಾಖೆಯ ಈ ನಿರ್ಧಾರ ಹೊರ ಬಿದ್ದಿದೆ.
ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆಯ ಹಿನ್ನೆಲೆಯಲ್ಲಿ ಶನಿವಾರದಿಂದ ಈ ರೈಲು ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚುವರಿಯಾಗಿ, ಎರಡು ವಾರಕ್ಕೊಮ್ಮೆ ಕೋಲ್ಕತ್ತಾ-ಖುಲ್ನಾ-ಕೋಲ್ಕತ್ತಾ ಬಂಧನ್ ಎಕ್ಸ್‌ಪ್ರೆಸ್ ರೈಲನ್ನು ಸಹ ಭಾನುವಾರ ರದ್ದುಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.
Advertisement