ಸರ್ಕಾರಿ ನೌಕರರು ಸಂಘ ಪರಿವಾರದ ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶ: ಕೇಂದ್ರದ ನಿರ್ಧಾರ ಶ್ಲಾಘಿಸಿದ RSS

ಕೇಂದ್ರ ಸರ್ಕಾರದ ಈ ನಿರ್ಧಾರವು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುತ್ತದೆ ಎಂದು ಆರ್‌ಎಸ್‌ಎಸ್ ಹೇಳಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸರ್ಕಾರಿ ನೌಕರರ ಮೇಲಿದ್ದ ನಿರ್ಬಂಧವನ್ನು ಮೋದಿ ಸರ್ಕಾರ ತೆಗೆದು ಹಾಕಿದ್ದು, ಕೇಂದ್ರದ ಈ ಕ್ರಮವನ್ನು ಆರ್‌ಎಸ್‌ಎಸ್ ಸೋಮವಾರ ಶ್ಲಾಘಿಸಿದೆ.

ಕೇಂದ್ರ ಸರ್ಕಾರದ ಈ ನಿರ್ಧಾರವು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುತ್ತದೆ ಎಂದು ಆರ್‌ಎಸ್‌ಎಸ್ ಹೇಳಿದೆ.

ಈ ಹಿಂದಿನ ಸರ್ಕಾರಗಳು ಸರ್ಕಾರಿ ನೌಕರರ ಮೇಲೆ ನಿಷೇಧ ಹೇರುವ ಮೂಲಕ ತಮ್ಮ ರಾಜಕೀಯ ಹಿತಾಸಕ್ತಿಗಳನ್ನು ಹೆಚ್ಚಿಸಿಕೊಂಡಿವೆ ಎಂದು ಸಂಘ ಆರೋಪಿಸಿದೆ. ಈ ಹಿಂದೆಯೂ ಸರ್ಕಾರ, ತನ್ನ ನೌಕರರು ಆರ್‌ಎಸ್‌ಎಸ್‌ ಸಹವಾಸ ಮಾಡುವುದನ್ನು ನಿರ್ಬಂಧಿಸಿದ ಹಲವು ನಿದರ್ಶನಗಳಿವೆ.

ಸಾಂದರ್ಭಿಕ ಚಿತ್ರ
ಸರ್ಕಾರಿ ನೌಕರರು RSS ನಲ್ಲಿ ತೊಡಗಿಕೊಳ್ಳುವುದಕ್ಕೆ ಇದ್ದ ನಿಷೇಧ ವಾಪಸ್: ಅಧಿಕಾರಿಗಳು ಇನ್ನು ಮುಂದೆ ನಿಕ್ಕರ್ ಧರಿಸಿಬರಬಹುದೆಂದು ಕಾಂಗ್ರೆಸ್ ಟೀಕೆ!

ಸರ್ಕಾರ ನೌಕರರ ಮೇಲಿದ್ದ ನಿರ್ಬಂಧವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಕೇಂದ್ರ ಸರ್ಕಾರ ಅಧಿಕೃತವಾಗಿ ಆದೇಶ ಪ್ರಕಟಿಸಿದ ಒಂದು ದಿನದ ನಂತರ ಆರ್ ಎಸ್ಎಸ್ ಇದನ್ನು ಸ್ವಾಗತಿಸಿದೆ. ಆದರೆ ಹಲವು ವಿರೋಧ ಪಕ್ಷದ ನಾಯಕರು ಈ ಕ್ರಮವನ್ನು ಟೀಕಿಸಿದ್ದಾರೆ.

RSS ವಕ್ತಾರ ಸುನೀಲ್ ಅಂಬೇಕರ್ ಅವರು, "ಸರ್ಕಾರದ ಪ್ರಸ್ತುತ ನಿರ್ಧಾರವು ಸೂಕ್ತವಾಗಿದೆ ಮತ್ತು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುತ್ತದೆ. "ರಾಷ್ಟ್ರೀಯ ಸ್ವಯಂಸೇವಕ ಸಂಘವು ಕಳೆದ 99 ವರ್ಷಗಳಿಂದ ರಾಷ್ಟ್ರದ ಪುನರ್ನಿರ್ಮಾಣ ಮತ್ತು ಸಮಾಜ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ" ಎಂದು ಪ್ರಕಟಿಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com