ಜಮ್ಮು ಮತ್ತು ಕಾಶ್ಮೀರಕ್ಕೆ ಕಳೆದ 6 ತಿಂಗಳಲ್ಲಿ 1 ಕೋಟಿಗೂ ಹೆಚ್ಚು ಪ್ರವಾಸಿಗರು ಭೇಟಿ

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು, ಕಾಶ್ಮೀರದ "ಪ್ರವಾಸೋದ್ಯಮ ಕ್ಷೇತ್ರವು ಕಳೆದ ಮೂರು ವರ್ಷಗಳಲ್ಲಿ ವಾರ್ಷಿಕ ಸರಾಸರಿ ಬೆಳವಣಿಗೆ ದರ ಶೇ. 15.13 ರಷ್ಟಿದೆ" ಎಂದು ಹೇಳಿದರು.
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗುಲ್ಮಾರ್ಗ್ ಸ್ಕೀ ರೆಸಾರ್ಟ್ ನಲ್ಲಿ ಸ್ಕೀಯಿಂಗ್ ಮಾಡಿ ಸಂಭ್ರಮಿಸುತ್ತಿರುವ ಪ್ರವಾಸಿಗರು.
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗುಲ್ಮಾರ್ಗ್ ಸ್ಕೀ ರೆಸಾರ್ಟ್ ನಲ್ಲಿ ಸ್ಕೀಯಿಂಗ್ ಮಾಡಿ ಸಂಭ್ರಮಿಸುತ್ತಿರುವ ಪ್ರವಾಸಿಗರು.
Updated on

ನವದೆಹಲಿ: ಆರ್ಟಿಕಲ್ 370 ರದ್ದತಿಯ ನಂತರ ಜಮ್ಮು ಮತ್ತು ಕಾಶ್ಮೀರ ಪ್ರವಾಸೋದ್ಯಮ ಕ್ಷೇತ್ರವು ಅಭೂತಪೂರ್ವ ಬೆಳವಣಿಗೆ ಕಂಡಿದ್ದು, ಈ ವರ್ಷ ಕಳೆದ ಆರು ತಿಂಗಳಲ್ಲಿ ಒಟ್ಟು 1.08 ಕೋಟಿ ಪ್ರವಾಸಿಗರು ಭೇಟಿ ನೀಡಿದ್ದಾರೆ ಎಂದು ಎಂದು ಕೇಂದ್ರ ಗೃಹ ಸಚಿವಾಲಯ(MHA) ಬುಧವಾರ ರಾಜ್ಯಸಭೆಗೆ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಎಂಎಚ್‌ಎಗೆ ನೀಡಿದ ವರದಿಯನ್ನು ಉಲ್ಲೇಖಿಸಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು, ಕಾಶ್ಮೀರದ "ಪ್ರವಾಸೋದ್ಯಮ ಕ್ಷೇತ್ರವು ಕಳೆದ ಮೂರು ವರ್ಷಗಳಲ್ಲಿ ವಾರ್ಷಿಕ ಸರಾಸರಿ ಬೆಳವಣಿಗೆ ದರ ಶೇ. 15.13 ರಷ್ಟಿದೆ" ಎಂದು ಹೇಳಿದರು.

2024ರ ಜನವರಿಯಿಂದ ಜೂನ್‌ವರೆಗೆ ಒಟ್ಟು 1,08,41,009 ಪ್ರವಾಸಿಗರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ ಮತ್ತು 2023ರಲ್ಲಿ 2,11,24,674 ಪ್ರವಾಸಿಗರು ಭೇಟಿ ನೀಡಿದ್ದಾರೆ. ಇದು ಇದುವರೆಗಿನ ಸಾರ್ವಕಾಲಿಕ ಗರಿಷ್ಠ ಪ್ರವಾಸಿಗರ ಸಂಖ್ಯೆಯಾಗಿದೆ ಎಂದು ರೈ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗುಲ್ಮಾರ್ಗ್ ಸ್ಕೀ ರೆಸಾರ್ಟ್ ನಲ್ಲಿ ಸ್ಕೀಯಿಂಗ್ ಮಾಡಿ ಸಂಭ್ರಮಿಸುತ್ತಿರುವ ಪ್ರವಾಸಿಗರು.
J&K ಕುಪ್ವಾರದಲ್ಲಿ ಎನ್‌ಕೌಂಟರ್‌: ಭಯೋತ್ಪಾದಕ ಹತ್ಯೆ, ಯೋಧ ಗಾಯ

2022ರಲ್ಲಿ 1,88,64,332 ಪ್ರವಾಸಿಗರ ಭೇಟಿ ನೀಡಿದ್ದು, 2021 ರಲ್ಲಿ 1,13,14,884 ಮತ್ತು 2020 ರಲ್ಲಿ 34,70,834 ಪ್ರವಾಸಿಗರು ಭೇಟಿ ನೀಡಿದ್ದಾರೆ. 2020 ರಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದಿಂದ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಜಮ್ಮು ಮತ್ತು ಕಾಶ್ಮೀರ ಪ್ರವಾಸೋದ್ಯಮ ನೀತಿ 2020 ಸೇರಿದಂತೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಗಮನಾರ್ಹ ಸುಧಾರಣೆಗೆ ಕಾರಣವಾದ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರ ವರದಿ ಮಾಡಿದೆ.

ಇನ್ನು ಹೆಚ್ಚುತ್ತಿರುವ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲು ಮತ್ತು ಪ್ರವಾಸೋದ್ಯಮ ಕ್ಷೇತ್ರದ ಆರ್ಥಿಕ ಲಾಭದಿಂದ ಸ್ಥಳೀಯರಿಗೆ ಪ್ರಯೋಜನಗಳನ್ನು ನೀಡಲು ಸರ್ಕಾರ ಹೋಂಸ್ಟೇ ಮಾರ್ಗಸೂಚಿಗಳನ್ನು ಸಹ ಪ್ರಕಟಿಸಿದೆ. ಸರ್ಕಾರವು ಜಮ್ಮು ಮತ್ತು ಕಾಶ್ಮೀರ ಚಲನಚಿತ್ರ ನೀತಿ- 2021 ಮತ್ತು ಹೌಸ್‌ಬೋಟ್ ನೀತಿ - 2020 ಜಾರಿಗೊಳಿಸಿದೆ ಅಲ್ಲದೆ 75 ಆಫ್-ಬೀಟ್ ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಸಚಿವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com