ಬಾಂಗ್ಲಾದೇಶದಿಂದ 6,700 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ವಾಪಸ್

ವಾರಗಳ ಹಿಂದೆ ಪ್ರಾರಂಭವಾದ ಘರ್ಷಣೆಯಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ."ಇದುವರೆಗೆ 6,700 ಭಾರತೀಯ ವಿದ್ಯಾರ್ಥಿಗಳು ಬಾಂಗ್ಲಾದೇಶದಿಂದ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
ಬಾಂಗ್ಲಾದಿಂದ ಮರಳಿದ ಭಾರತೀಯ ವಿದ್ಯಾರ್ಥಿಗಳು
ಬಾಂಗ್ಲಾದಿಂದ ಮರಳಿದ ಭಾರತೀಯ ವಿದ್ಯಾರ್ಥಿಗಳು
Updated on

ನವದೆಹಲಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಘರ್ಷಣೆಗಳ ಹಿನ್ನೆಲೆಯಲ್ಲಿ ಸುಮಾರು 6,700 ಭಾರತೀಯ ವಿದ್ಯಾರ್ಥಿಗಳು ಅಲ್ಲಿಂದ ಸ್ವದೇಶಕ್ಕೆ ಮರಳಿದ್ದಾರೆ.

ವಿವಾದಾತ್ಮಕ ಉದ್ಯೋಗ ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸುವಂತೆ ಶೇಖ್ ಹಸೀನಾ ನೇತೃತ್ವದ ಸರ್ಕಾರವನ್ನು ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾನಿರತ ವಿದ್ಯಾರ್ಥಿಗಳು ಹಾಗೂ ಭದ್ರತಾ ಪಡೆಗಳೊಂದಿಗೆ ಸಂಘರ್ಘ ಉಂಟಾಗಿದ್ದು, ವಾರ ಕಳೆದರೂ ಪರಿಸ್ಥಿತಿ ಇನ್ನೂ ಸಹಜ ಸ್ಥಿತಿಗೆ ಮರಳಿಲ್ಲ.

ಬಾಂಗ್ಲಾದಿಂದ ಮರಳಿದ ಭಾರತೀಯ ವಿದ್ಯಾರ್ಥಿಗಳು
ಬಾಂಗ್ಲಾದೇಶ ಹಿಂಸಾಚಾರ: 151 ಮಂದಿ ಸಾವು; ಉದ್ಯೋಗ ಕೋಟಾ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಪ್ರತಿಭಟನೆ ಕೈಬಿಡುವಂತೆ ಸೂಚನೆ

ವಾರಗಳ ಹಿಂದೆ ಪ್ರಾರಂಭವಾದ ಘರ್ಷಣೆಯಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ."ಇದುವರೆಗೆ 6,700 ಭಾರತೀಯ ವಿದ್ಯಾರ್ಥಿಗಳು ಬಾಂಗ್ಲಾದೇಶದಿಂದ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಬಾಂಗ್ಲಾದೇಶದ ನೆರೆಯ ಮಿತ್ರ ರಾಷ್ಟ್ರವಾಗಿರುವುದರಿಂದ ಆ ದೇಶದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತದೆ ಎಂದು ಭಾವಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com