'ಕಾರ್ಗಿಲ್ ವಿಜಯ ದಿವಸ್' 25 ವರ್ಷ: ಇತಿಹಾಸದ ಮೆಲುಕು; ಯುದ್ಧ ಸ್ಮಾರಕಕ್ಕೆ ಪ್ರಧಾನಿ ಮೋದಿ ಇಂದು ಭೇಟಿ

ಜುಲೈ 14, 1999 ರಂದು ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆಪರೇಷನ್ ವಿಜಯ್ ಯಶಸ್ವಿಯಾಗಿದೆ ಎಂದು ಘೋಷಿಸಿದರು. ಕಾರ್ಗಿಲ್ ಗಡಿ ನಿಯಂತ್ರಣ ರೇಖೆಯ (LC) ಭಾರತದ ಭಾಗದಲ್ಲಿ ಪಾಕಿಸ್ತಾನ ಸೇನೆ ಬೆಂಬಲಿತ ಶಸ್ತ್ರಸಜ್ಜಿತ ಭಯೋತ್ಪಾದಕರ ಅಪ್ರಚೋದಿತ ಒಳನುಗ್ಗುವಿಕೆಯಿಂದಾಗಿ 'ಆಪರೇಷನ್ ವಿಜಯ್' ಆರಂಭವಾಗಿತ್ತು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಜುಲೈ 26, ಭಾರತದ ಇತಿಹಾಸದಲ್ಲಿ ಕಾರ್ಗಿಲ್ ವಿಜಯ ದಿನ.(Kargil Vijay Diwas) 1999 ರ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ವಿಜಯವನ್ನು ಸ್ಮರಿಸುವ ದಿನ. ಕಾರ್ಗಿಲ್, ಲಡಾಖ್‌ನಲ್ಲಿ ಈ ಹಿಂದೆ ಪಾಕಿಸ್ತಾನಿ ಪಡೆಗಳಿಂದ ವಶಪಡಿಸಿಕೊಂಡಿದ್ದ ಆಯಕಟ್ಟಿನ ಪ್ರಮುಖ ಪ್ರದೇಶವನ್ನು ಭಾರತೀಯ ಸೇನೆಯು ಪುನಃ ಪಡೆದುಕೊಂಡ ದಿನ. ಈ ದಿನವು ದೇಶದ ಸಾರ್ವಭೌಮತ್ವವನ್ನು ಶೌರ್ಯದಿಂದ ರಕ್ಷಿಸಿದ ಭಾರತೀಯ ಸೈನಿಕರ ಧೈರ್ಯ ಮತ್ತು ತ್ಯಾಗವನ್ನು, ಅವರ ಬಲಿದಾನವನ್ನು ಕೊಂಡಾಡುವ, ಭಾರತೀಯರೆಲ್ಲರೂ ಹೆಮ್ಮೆಯಿಂದ ಸ್ಮರಿಸುವ ದಿನ.

ಹಿನ್ನೆಲೆಯೇನು?: ಅದು ಜುಲೈ 14, 1999 ರಂದು ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆಪರೇಷನ್ ವಿಜಯ್ ಯಶಸ್ವಿಯಾಗಿದೆ ಎಂದು ಘೋಷಿಸಿದರು. ಕಾರ್ಗಿಲ್ ಗಡಿ ನಿಯಂತ್ರಣ ರೇಖೆಯ (LC) ಭಾರತದ ಭಾಗದಲ್ಲಿ ಪಾಕಿಸ್ತಾನ ಸೇನೆ ಬೆಂಬಲಿತ ಶಸ್ತ್ರಸಜ್ಜಿತ ಭಯೋತ್ಪಾದಕರ ಅಪ್ರಚೋದಿತ ಒಳನುಗ್ಗುವಿಕೆಯಿಂದಾಗಿ 'ಆಪರೇಷನ್ ವಿಜಯ್' ಆರಂಭವಾಗಿತ್ತು.

image-fallback
ಕಾರ್ಗಿಲ್ ವಿಜಯ ದಿವಸ ಆಚರಣೆ

ಕಾರ್ಗಿಲ್ ವಿಜಯ ದಿನ ಮಹತ್ವ: ಕಾರ್ಗಿಲ್ ಯುದ್ಧದ ಸಮಯದಲ್ಲಿ ಭಾರತೀಯ ಸಶಸ್ತ್ರ ಪಡೆಗಳ 527 ಸೈನಿಕರು ಹುತಾತ್ಮರಾದ ಕಾರಣ ಭಾರತವು ಈ ದಿನಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತದೆ. ಅವರ ಬಲಿದಾನದ ಸ್ಮರಣಾರ್ಥ ಈ ದಿನವನ್ನು ಆಚರಿಸಲಾಗುತ್ತದೆ.

ಇಂದು ಕಾರ್ಗಿಲ್ ವಿಜಯದ 25 ನೇ ವಾರ್ಷಿಕೋತ್ಸವದ ಗೌರವಾರ್ಥವಾಗಿ, ಭಾರತೀಯ ವಾಯುಪಡೆಯು ಮೊನ್ನೆ ಜುಲೈ 12 ರಿಂದ ಇಂದಿನವರೆಗೆ ಏರ್ ಫೋರ್ಸ್ ಸ್ಟೇಷನ್ ಸರ್ಸಾವಾದಲ್ಲಿ 'ಕಾರ್ಗಿಲ್ ವಿಜಯ್ ದಿವಸ್ ರಜತ್ ಜಯಂತಿ' ಸ್ಮರಣಾರ್ಥವನ್ನು ಆಚರಿಸುತ್ತಿದೆ.

ಪ್ರಧಾನಿ ಮೋದಿ ಭೇಟಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಲಡಾಕ್ ನಲ್ಲಿರುವ ಡ್ರಾಸ್ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಕಾರ್ಗಿಲ್ ಯುದ್ಧದಲ್ಲಿ ಸರ್ವೋಚ್ಚ ತ್ಯಾಗ ಮಾಡಿದ ವೀರರಿಗೆ ಗೌರವ ಸಲ್ಲಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು ವರ್ಚುವಲ್ ಮೂಲಕ ಶಿಂಕುನ್ ಲಾ ಸುರಂಗ ಯೋಜನೆಯ ಮೊದಲ ಸ್ಫೋಟಕ ನಡೆಸಿಕೊಡಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com