
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಶನಿವಾರ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಸ್ಕಿಡ್ ಆಗಿ ಕಮರಿಗೆ ಬಿದ್ದಿದ್ದು, ಭೀಕರ ಅಪಘಾತದಲ್ಲಿ ಐದು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರಿನಲ್ಲಿದ್ದ ಒಬ್ಬ ಪೊಲೀಸ್, ಇಬ್ಬರು ಮಹಿಳೆಯರು ಮತ್ತು 6 ರಿಂದ 16 ವರ್ಷದೊಳಗಿನ ಐದು ಮಕ್ಕಳು ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.
ಮೃತರು ಕಿಶ್ತ್ವಾರ್‌ನಿಂದ ಸಿಂಥನ್ ಟಾಪ್ ಮೂಲಕ ಮಾರ್ವಾ ಕಡೆಗೆ ಪ್ರಯಾಣಿಸುತ್ತಿದ್ದಾಗ ಅವರ ಕಾರು ರಸ್ತೆಯಿಂದ ಸ್ಕಿಡ್ ಆಗಿ ದಕ್ಸಮ್‌ನಲ್ಲಿ ಕಮರಿಗೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಂದೇ ಕುಟುಂಬದ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.
Advertisement