
ಮಧ್ಯಪ್ರದೇಶ: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ 13 ವರ್ಷದ ಹದಿಹರೆಯದ ಸಹೋದರ ತನ್ನ ತಂಗಿ ಮೇಲೆ ಅತ್ಯಾಚಾರವೆಸಗಿ ಕೊಂದು ಹಾಕಿರುವ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ.
ಏಪ್ರಿಲ್ 24 ರಂದು ನಡೆದಿದ್ದ ಒಂಬತ್ತು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಈ ಘೋರ ಕೃತ್ಯವನ್ನು ಪತ್ತೆ ಹಚ್ಚಿದ್ದಾರೆ. ಅಲ್ಲದೇ, ಪ್ರಕರಣ ಮುಚ್ಚಿಡಲು ಹಿರಿಯ ಸಹೋದರಿಯರು ಸಹಾಯ ಮಾಡಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
50 ಜನರ ವಿಚಾರಣೆ, ಆರೋಪಿಗಳ ತೀವ್ರ ವಿಚಾರಣೆ ಮತ್ತು ತಾಂತ್ರಿಕ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಪೊಲೀಸರು ಪ್ರಕರಣವನ್ನು ಭೇದಿಸಿ ಸಂತ್ರಸ್ತೆಯ 13 ವರ್ಷದ ಸಹೋದರ, ಅವರ ತಾಯಿ ಮತ್ತು 17 ಮತ್ತು 18 ವರ್ಷದ ಸಹೋದರಿಯರನ್ನು ಬಂಧಿಸಿದ್ದಾರೆ ಎಂದು ಅವರು ಶನಿವಾರ ಹೇಳಿದರು.
ಪ್ರಕರಣದ ವಿವರಗಳನ್ನು ಒದಗಿಸಿದ ಪೊಲೀಸ್ ಅಧೀಕ್ಷಕ ವಿವೇಕ್ ಸಿಂಗ್, "ಏಪ್ರಿಲ್ 24 ರಂದು ಜಾವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂಬತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು. ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಘಟನೆ ಸಂದರ್ಭದಲ್ಲಿ ಮನೆಯ ಅಂಗಳದಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಸಂತ್ರಸ್ತೆ ಮೃತದೇಹವನ್ನು ವಶಕ್ಕೆ ಪಡೆಯಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
Advertisement