
ನವದೆಹಲಿ: CUET-UG ಪರೀಕ್ಷಾ ಫಲಿತಾಂಶವನ್ನು (CUET UG Result 2024) National Testing Agency (NTA) ಭಾನುವಾರ ಪ್ರಕಟಿಸಿದೆ.
ಪದವಿಪೂರ್ವ ಕೋರ್ಸ್ಗಳಿಗೆ ಸೇರಲು ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು cuetug.ntaonline.in ವೆಬ್ಸೈಟ್ನಲ್ಲಿ ತಮ್ಮ ಫಲಿತಾಂಶ ಮತ್ತು ಅಂಕಗಳನ್ನು ಪರಿಶೀಲಿಸಬಹುದು.
ಸಿಯುಇಟಿ ಯುಜಿ ಪರೀಕ್ಷೆಯನ್ನು ಮೇ 15, 16, 17, 18, 21, 22, 24 ಮತ್ತು 29 ರಂದು ವಿದೇಶದ 26 ನಗರಗಳು ಸೇರಿದಂತೆ 379 ನಗರಗಳಲ್ಲಿರುವ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಒಟ್ಟು 13.48 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಜುಲೈ 19, 2024 ರಂದು ಮರು ಪರೀಕ್ಷೆ ನಡೆಸಲಾಗಿತ್ತು. ತಾತ್ಕಾಲಿಕ ಕೀ ಉತ್ತರಗಳನ್ನು ಜುಲೈ 7 ರಂದು ಬಿಡುಗಡೆ ಮಾಡಲಾಗಿತ್ತು. ಅಂತೆಯೇ ಆಕ್ಷೇಪಣೆ ವಿಂಡೋವನ್ನು ಜುಲೈ 9, 2024 ರಂದು ಮುಚ್ಚಲಾಗಿತ್ತು.
ಫಲಿತಾಂಶ ವೀಕ್ಷಣೆಗೆ ಈ ಕೆಳಕಂಡ ವೆಬ್ ಸೈಟ್ ಗೆ ಭೇಟಿ ನೀಡಿ
ಸಿಯುಇಟಿ ಯುಜಿ ಫಲಿತಾಂಶಗಳನ್ನು exams.nta.ac.in/CUET-UG/ ವೆಬ್ ಸೈಟ್ ನಲ್ಲಿ ಲಾಗಿನ್ ಆಗುವ ಮೂಲಕ ಪರಿಶೀಲಿಸಬಹುದು.
Advertisement