
ಮೊರೆನಾ: ಮಧ್ಯಪ್ರದೇಶದ ಮೊರೆನಾದಲ್ಲಿ ಸೋಮವಾರ ಟ್ರ್ಯಾಕ್ಟರ್-ಟ್ರಾಲಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು 'ಕನ್ವಾರಿಯಾಗಳು' ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 44 ರಲ್ಲಿ ಮುಂಜಾನೆ 5 ಗಂಟೆಗೆ ಈ ಘಟನೆ ನಡೆದಿದೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಟ್ರಕ್ ಚಾಲಕನನ್ನು ಥಳಿಸಿದ್ದು, ಸ್ವಲ್ಪ ಸಮಯದವರೆಗೆ ರಸ್ತೆ ತಡೆ ನಡೆಸಿದರು ಎಂದು ಅಧಿಕಾರಿ ತಿಳಿಸಿದ್ದಾರೆ.
ಕನ್ವಾರಿಯಾಗಳಿಗೆ ನೆರವಾಗಲು ಟ್ರಾಕ್ಟರ್-ಟ್ರಾಲಿ ಮೆರವಣಿಗೆಯಲ್ಲಿ ತೆರಳುತಿತ್ತು ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅಪಾಯದಿಂದ ಪಾರಾಗಿದ್ದಾರೆ. ಗ್ರಾಮಸ್ಥರಿಂದ ರಸ್ತೆ ತಡೆಯನ್ನು ತೆರವುಗೊಳಿಸಲಾಗಿದೆ ಎಂದು ಮೊರೆನಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಅನುರಾಗ್ ಠಾಕೂರ್ ತಿಳಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡಲು ಸ್ಥಳದಲ್ಲಿ ಸಾಕಷ್ಟು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹೆಚ್ಚುವರಿ ಎಸ್ಪಿ ಮಾಹಿತಿ ನೀಡಿದರು. ಹಿಂದೂ ತಿಂಗಳ ಶ್ರಾವಣದಲ್ಲಿ ಶಿವಲಿಂಗಗಳ 'ಜಲ ಅಭಿಷೇಕ' ಮಾಡಲು ಗಂಗಾ ನದಿಯಿಂದ ನೀರು ತರಲು ಕನ್ವಾರಿಯಾಗಳು ಮೆರವಣಿಗೆಯಲ್ಲಿ ತೆರಳುತ್ತಾರೆ.
Advertisement