
ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಸಿಬಿಐ ಸೋಮವಾರ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ತನಿಕಾ ಸಂಸ್ಥೆಯು ರೋಸ್ ಅವೆನ್ಯೂದಲ್ಲಿರುವ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅವರು ಹೇಳಿದ್ದಾರೆ.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ(ಎಎಪಿ) ರಾಷ್ಟ್ರೀಯ ಸಂಚಾಲಕರ ವಿರುದ್ಧ ಸಿಬಿಐ ಕೇಸ್ ದಾಖಲಿಸಿದ್ದು, ಜೂನ್ 26 ರಂದು ತಿಹಾರ್ ಜೈಲಿನಲ್ಲಿ ಅವರನ್ನು ಬಂಧಿಸಿತ್ತು.
ಮಾರ್ಚ್ 21ರಂದು ಇಡಿಯಿಂದ ಬಂಧನಕ್ಕೊಳಗಾಗಿದ್ದ ದೆಹಲಿ ಸಿಎಂ ಕೇಜ್ರಿವಾಲ್ ಅವರು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದಾರೆ. ಆದರೆ ಸಿಬಿಐ ದಾಖಲಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಇನ್ನೂ ನ್ಯಾಯಾಂಗ ಬಂಧನದಲ್ಲಿದ್ದಾರೆ.
Advertisement