
ವಯನಾಡ್: ಕೇರಳದಲ್ಲಿ ವಯನಾಡಿನಲ್ಲಿ ಹಲವು ಬಾರಿ ಭೂಕುಸಿತ ಉಂಟಾಗಿ ಇದುವರೆಗೆ 30 ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿ ಪಣರಾಯಿ ವಿಜಯ್ ಅವರ ಬಳಿ ಮಾತನಾಡಿದ್ದು, ಕೇಂದ್ರದಿಂದ ಸಾಧ್ಯವಾಗುವ ಎಲ್ಲಾ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ವಯನಾಡಿನ ಕೆಲವು ಭಾಗಗಳಲ್ಲಿ ಭೂಕುಸಿತದಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ, ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ, ಗಾಯಗೊಂಡವರು ಬೇಗ ಗುಣಮುಖರಾಗಲಿ. ಭೂಕುಸಿತದ ಕುರಿತು ಪಿಣರಾಯಿ ವಿಜಯ್ ಅವರೊಂದಿಗೆ ಮಾತನಾಡಿದ್ದೇನೆ ಎಲ್ಲಾ ನೆರವನ್ನು ನೀಡಲು ಕೇಂದ್ರ ಸಿದ್ಧವಿದೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಸುರೇಶ್ ಗೋಪಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ಬಳಿಯೂ ಮಾತನಾಡಿದ್ದು, ಬಿಜೆಪಿ ಕಾರ್ಯಕರ್ತರನ್ನು ಕಳುಹಿಸಿ ಅವರಿಗೆ ಬೇಕಾದ ನೆರವು ಒದಗಿಸುವಂತೆ ಕೇಳಿದ್ದಾರೆ. ಸಚಿವ ಜಾರ್ಜ್ ಅವರ ಬಳಿಯೂ ಮಾತನಾಡಿದ್ದಾರೆ.
ರಾಷ್ಟ್ರಪತಿಗಳ ಸಂತಾಪ: ವಯನಾಡಿನಲ್ಲಿ ಭೂಕುಸಿತದಿಂದ ಪ್ರಾಣ ಕಳೆದುಕೊಂಡವರಿಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
ಗೃಹ ಸಚಿವ ಅಮಿತ್ ಶಾ ಸೇರಿದಂತೆ ಕೇಂದ್ರದ ಹಲವು ನಾಯಕರು, ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಘಟನೆ ಬಗ್ಗೆ ಸಂತಾಪ ಸೂಚಿಸಿದ್ದಾರೆ.
Advertisement