Lok Sabha Election 2024: ಅಂತಿಮ ಹಂತದ ಮತದಾನ, ಬಂಗಾಳದಲ್ಲಿ ಹಿಂಸಾಚಾರ; ಕೊಳಕ್ಕೆ EVM ಯಂತ್ರ ಎಸೆದು ಆಕ್ರೋಶ, ಪರಸ್ಪರ ಬಾಂಬ್ ಎಸೆತ!

ಹಾಲಿ ಲೋಕಸಭಾ ಚುನಾವಣೆಯ 7ನೇ ಮತ್ತು ಅಂತಿಮ ಹಂತದ ಮತದಾನ ಚಾಲ್ತಿಯಲ್ಲಿರುವಂತೆಯೇ ಇತ್ತ ಬಂಗಾಳದಲ್ಲಿ ಚುನಾವಣಾ ಹಿಂಸಾಚಾರ ವರದಿಯಾಗಿದೆ.
Angry mob disrupts polling in Bengal
ಬಂಗಾಳದಲ್ಲಿ ಚುನಾವಣಾ ಘರ್ಷಣೆ
Updated on

ಕೋಲ್ಕತಾ: ಹಾಲಿ ಲೋಕಸಭಾ ಚುನಾವಣೆಯ 7ನೇ ಮತ್ತು ಅಂತಿಮ ಹಂತದ ಮತದಾನ ಚಾಲ್ತಿಯಲ್ಲಿರುವಂತೆಯೇ ಇತ್ತ ಬಂಗಾಳದಲ್ಲಿ ಚುನಾವಣಾ ಹಿಂಸಾಚಾರ ವರದಿಯಾಗಿದೆ.

ಹಾಲಿ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಇಂದು ನಡೆಯುತ್ತಿದ್ದು, 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ ಒಳಗೊಂಡು ಒಟ್ಟು 57 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

ಪಂಜಾಬ್‌ನ ಎಲ್ಲಾ 13 ಲೋಕಸಭಾ ಕ್ಷೇತ್ರಗಳು, ಉತ್ತರಪ್ರದೇಶದ 13 ಕ್ಷೇತ್ರಗಳು, ಪಶ್ಚಿಮ ಬಂಗಾಳ 09, ಬಿಹಾರ 08, ಒಡಿಶಾ06, ಹಿಮಾಚಲ ಪ್ರದೇಶ04, ಜಾರ್ಖಂಡ್03, ಕೇಂದ್ರಾಡಳಿ ಪ್ರದೇಶದ ಚಂಡೀಗಢ 01 ಕ್ಷೇತ್ರಕ್ಕೆ ಮತದಾನ ನಡೆಯುತ್ತಿದೆ. 5.24 ಕೋಟಿ ಪುರುಷ, 4.82 ಮಹಿಳೆಯರು ಸೇರಿ 10.06 ಕೋಟಿ ಮತದಾರರು ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ.

Angry mob disrupts polling in Bengal
ಲೋಕಸಭಾ ಚುನಾವಣೆ 2024: ಕೊನೆ ಹಂತದ ಮತದಾನ ಪ್ರಗತಿಯಲ್ಲಿ, ಪ್ರಧಾನಿ ಮೋದಿ ಸೇರಿ ಘಟಾನುಘಟಿಗಳ ಸ್ಪರ್ಧೆ

ಇದಲ್ಲದೆ ಒಡಿಶಾ ವಿಧಾನಸಭೆ ಚುನಾವಣೆಯ ಬಾಕಿಯಿರುವ 42 ಕ್ಷೇತ್ರಗಳು ಮತ್ತು ಹಿಮಾಚಲದ ಪ್ರದೇಶ 06 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ.

ಬಂಗಾಳದಲ್ಲಿ ಚುನಾವಣಾ ಹಿಂಸಾಚಾರ

ಪಶ್ಚಿಮ ಬಂಗಾಳದ ಒಂಬತ್ತು ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಆದರೆ ಜಾದವ್‌ಪುರ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಭಾಂಗಾರ್‌ನ ಸತುಲಿಯಾ ಪ್ರದೇಶದಲ್ಲಿ ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್‌ಎಫ್) ಮತ್ತು ಸಿಪಿಐ(ಎಂ) ಬೆಂಬಲಿಗರ ನಡುವೆ ಘರ್ಷಣೆಗಳು ಉಂಟಾಗಿ ಹಿಂಸಾಚಾರ ನಡೆದಿದೆ. ಈ ಘರ್ಷಣೆ ವೇಳೆ ಹಲವರಿಗೆ ಗಾಯಗಳಾಗಿದ್ದು ಪರಿಸ್ಥಿತಿ ಉಲ್ಬಣಗೊಂಡಿದೆ. ಕಿಡಿಗೇಡಿಗಳು ಬಾಂಬ್​ ದಾಳಿ ನಡೆಸಿ ಮತಗಟ್ಟೆಗೆ ನುಗ್ಗಿ, ಎಲೆಕ್ಟ್ರಾನಿಕ್ ಮತಯಂತ್ರವನ್ನು (ಇವಿಎಂ) ಕೊಳಕ್ಕೆ ಎಸೆದಿದ್ದಾರೆ.

ಅಂತೆಯೇ ಡೈಮಂಡ್ ಹಾರ್ಬರ್ ಕ್ಷೇತ್ರದ ವಿವಿಧ ಭಾಗಗಳಲ್ಲಿ ಟಿಎಂಸಿ, ಐಎಸ್‌ಎಫ್ ಮತ್ತು ಬಿಜೆಪಿ ಕಾರ್ಯಕರ್ತರು ಘರ್ಷಣೆ ನಡೆಸಿದ್ದು, ಬೂತ್‌ಗಳಿಗೆ ಪೋಲಿಂಗ್ ಏಜೆಂಟ್‌ಗಳನ್ನು ಪ್ರವೇಶಿಸುವುದನ್ನು ತಡೆಯುವ ವಿಚಾರದ ಕುರಿತು ಈ ಘರ್ಷಣೆ ಏರ್ಪಟ್ಟಿದ್ದು, ಟಿಎಂಸಿ, ಐಎಸ್‌ಎಫ್ ಮತ್ತು ಬಿಜೆಪಿ ಬೆಂಬಲಿಗರ ನಡುವೆ ಘರ್ಷಣೆಗಳು ನಡೆದಿವೆ. ಎರಡೂ ಕಡೆಯಿಂದ ಕಚ್ಚಾ ಬಾಂಬ್‌ಗಳನ್ನು ಎಸೆಯಲಾಗಿದ್ದು, ಪರಸ್ಪರ ದೊಣ್ಣೆ, ಬಡಿಗೆಗಳನ್ನು ಹಿಡಿದು ಹೊಡೆದಾಡಿದ್ದಾರೆ.

ಸುದ್ದಿಗಾರರ ಮೇಲೆಯೇ ಹಲ್ಲೆ

ಅಂತೆಯೇ ಪಶ್ಚಿಮ ಬಂಗಾಳದ ಜಯನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕ್ಯಾನಿಂಗ್‌ನಲ್ಲಿ ಟಿಎಂಸಿ-ಬಿಜೆಪಿ ಘರ್ಷಣೆಯಲ್ಲಿ ಎಎನ್‌ಐ ಸುದ್ದಿಸಂಸ್ಥೆಯ ವರದಿಗಾರನ ಮೇಲೆ ಹಲ್ಲೆಯಾಗಿದ್ದು, ವರದಿಗಾರ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಪ್ರದೇಶದಲ್ಲಿ ಎರಡು ಪಕ್ಷಗಳ ನಡುವೆ ಕಲ್ಲು ತೂರಾಟ ನಡೆದಿದ್ದು, ಈ ವೇಳೆ ವರದಿಗಾರ ಬಂಟಿ ಮುಖರ್ಜಿ ತೀವ್ರವಾಗಿ ಗಾಯಗೊಂಡರು. ಅವರ ತಲೆಗೆ ಗಂಭೀರ ಪೆಟ್ಟಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಕೋಲ್ಕತ್ತಾದ ಮೆಡಿಕಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com