
ನವದೆಹಲಿ: ಲೋಕಸಭಾ ಚುನಾವಣೆಯ ಮತದಾನೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಜಯಭೇರಿ ಬಾರಿಸಲಿದೆ ಎಂದು ಭವಿಷ್ಯ ನುಡಿದಿವೆ.
ಈ ಸಮೀಕ್ಷೆಗಳ ಕುರಿತು ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ಎನ್ ಡಿಎ ಸರ್ಕಾರವನ್ನು ಮರು ಆಯ್ಕೆ ಮಾಡಲು ಜನರು ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ ಎಂದು ವಿಶ್ವಾಸದಿಂದ ಹೇಳಬಲ್ಲೆ ಎಂದು ಹೇಳಿದ್ದಾರೆ.
'ಅವಕಾಶವಾದಿ INDIA ಬಣ ಮೈತ್ರಿ' ಮತದಾರರನ್ನು ಸೆಳೆಯುವಲ್ಲಿ ವಿಫಲವಾಗಿದೆ ಎಂದು ಹೇಳಿದ ಅವರು, ವಿಪಕ್ಷಗಳ ಮೈತ್ರಿಕೂಟವನ್ನು ಜಾತಿವಾದಿ, ಕೋಮುವಾದಿ ಮತ್ತು ಭ್ರಷ್ಟಾಚಾರಿಗಳ ಕೂಟ ಎಂದು ಕರೆದರು.
"ಚುನಾವಣೆ ಪ್ರಚಾರದ ಮೂಲಕ ವಿಪಕ್ಷಗಳ ಮೈತ್ರಿಕೂಟ ಮೋದಿಯನ್ನು ಧಿಕ್ಕರಿಸುವಲ್ಲಿ ತನ್ನ ಪರಿಣತಿಯನ್ನು ಹೆಚ್ಚಿಸಿಕೊಂಡಿದೆ. ಜನರು ಅಂತಹ ಪ್ರತಿಗಾಮಿ ರಾಜಕೀಯವನ್ನು ತಿರಸ್ಕರಿಸಿದ್ದಾರೆ ಎಂದು ಮೋದಿ ಹೇಳಿದ್ದಾರೆ.
Advertisement