Delhi Excise Policy Case: ತಿಹಾರ್ ಜೈಲಿಗೆ ಶರಣಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್!

ದೆಹಲಿ ಅಬಕಾರಿ ನೀತಿ ಹಗರಣದ ಹವಾಲಾ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂದು ತಿಹಾರ್ ಜೈಲಿಗೆ ಶರಣಾಗಿದ್ದಾರೆ.
Kejriwal surrenders at Tihar jail
ಅರವಿಂದ್ ಕೇಜ್ರಿವಾಲ್
Updated on

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಹವಾಲಾ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂದು ತಿಹಾರ್ ಜೈಲಿಗೆ ಶರಣಾಗಿದ್ದಾರೆ.

ಮನಿಲಾಂಡರಿಂಗ್ ಪ್ರಕರಣದಲ್ಲಿ ಈ ಹಿಂದೆ ಸುಪ್ರೀಂ ಕೋರ್ಟ್ ನೀಡಿದ್ದ ಮಧ್ಯಂತರ ಜಾಮೀನು ಜೂನ್ 1 ರಂದು ಕೊನೆಗೊಂಡ ಹಿನ್ನಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ತಿಹಾರ್ ಜೈಲಿಗೆ ಬಂದು ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ.

Kejriwal surrenders at Tihar jail
ತಿಹಾರ್ ಜೈಲಿಗೆ ಶರಣಾಗುವ ಮುನ್ನ ರಾಜ್ ಘಾಟ್, ಹನುಮಾನ್ ಮಂದಿರಕ್ಕೆ ಭೇಟಿ ನೀಡುತ್ತೇನೆ: ಅರವಿಂದ ಕೇಜ್ರಿವಾಲ್

ಈ ಹಿಂದೆ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರಚಾರ ನಡೆಸಲು ಅವರಿಗೆ ಜಾಮೀನು ನೀಡಲಾಗಿತ್ತು. ಇದೀಗ ಕೇಜ್ರಿವಾಲ್ ತಿಹಾರ್ ಜೈಲಿಗೆ ಬಂದು ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ. ಶರಣಾಗುವ ಮುನ್ನ ಕೇಜ್ರಿವಾಲ್ ಅವರು ರಾಜ್ ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದರು. ಬಳಿಕ ಕನ್ನಾಟ್ ನಲ್ಲಿರುವ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಇದಕ್ಕೂ ಮೊದಲು ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಈ ವೇಳೆ, ''ನಾನು ಮತ್ತೆ ಜೈಲಿಗೆ ಹೋಗುತ್ತಿರುವುದು ಭ್ರಷ್ಟಾಚಾರದಲ್ಲಿ ತೊಡಗಿದ್ದಕ್ಕಾಗಿ ಅಲ್ಲ, ನಾನು ಸರ್ವಾಧಿಕಾರದ ವಿರುದ್ಧ ಧ್ವನಿ ಎತ್ತಿದ್ದರಿಂದ ಜೈಲಿಗೆ ಹೋಗುತ್ತಿದ್ದೇನೆ. ನನಗೆ ಸುಪ್ರೀಂ ಕೋರ್ಟ್ 21 ದಿನಗಳ (ಪರಿಹಾರ) ಅವಕಾಶ ನೀಡಿತು. ಈ 21 ದಿನಗಳು ಅವಿಸ್ಮರಣೀಯ. ನಾನು ಒಂದು ನಿಮಿಷವೂ ವ್ಯರ್ಥ ಮಾಡಲಿಲ್ಲ. ನಾನು ದೇಶವನ್ನು ಉಳಿಸಲು ಪ್ರಚಾರ ಮಾಡಿದ್ದೇನೆ.

ಎಎಪಿಗಿಂತ ಮೊದಲು ನನಗೆ ನನ್ನ ದೇಶ ಮುಖ್ಯ ಎಂದು ಕೇಜ್ರಿವಾಲ್ ಹೇಳಿದರು. ಅಂತೆಯೇ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮೂರನೇ ಬಾರಿಗೆ ಅಧಿಕಾರಿದ ಗದ್ದುಗೆ ಏರಲಿದೆ ಎಂಬ ಭವಿಷ್ಯ ನುಡಿಯುವ ಎಲ್ಲಾ ಎಕ್ಸಿಟ್ ಪೋಲ್‌ಗಳು "ನಕಲಿ" ಎಂದು ಕೇಜ್ರಿವಾಲ್ ಪ್ರತಿಪಾದಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com