ಮಧ್ಯಪ್ರದೇಶ: ಟ್ರ್ಯಾಕ್ಟರ್ ಪಲ್ಟಿಯಾಗಿ 13 ಮಂದಿ ಸಾವು, ಹಲವರಿಗೆ ಗಾಯ

ಮಧ್ಯಪ್ರದೇಶದ ರಾಜ್‌ಗಢದಲ್ಲಿ ತಡರಾತ್ರಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದಾರೆ.
ಅಪಘಾತದ ಚಿತ್ರ
ಅಪಘಾತದ ಚಿತ್ರ
Updated on

ರಾಜ್ ಗಢ: ಮಧ್ಯಪ್ರದೇಶದ ರಾಜ್‌ಗಢದಲ್ಲಿ ತಡರಾತ್ರಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದಾರೆ. ರಾಜ್‌ಗಢ್‌ನ ಪಿಪ್ಲೋಡಿಯಲ್ಲಿ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಮದುವೆ ಮೆರವಣಿಗೆ ವೇಳೆಯಲ್ಲಿ ನಡೆದ ಘಟನೆಯಲ್ಲಿ ಒಟ್ಟು 15 ಜನರು ಗಾಯಗೊಂಡಿದ್ದಾರೆ.

ಮೆರವಣಿಗೆ ರಾಜಸ್ಥಾನದ ಮೋತಿಪುರದಿಂದ ಕುಲಂಪುರಕ್ಕೆ ತೆರಳುತ್ತಿತ್ತು ಎಂದು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ರಾಜ್‌ಗಢ ಜಿಲ್ಲಾಧಿಕಾರಿ ಹರ್ಷ್ ದೀಕ್ಷಿತ್, ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸಚಿವ ನಾರಾಯಣ್ ಸಿಂಗ್ ಪನ್ವಾರ್ ಸ್ಥಳಕ್ಕೆ ಭೇಟಿ ನೀಡಿದ್ದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅಪಘಾತದ ಚಿತ್ರ
ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ: ರಕ್ತದ ಮಾದರಿ ಬದಲಾಯಿಸಿದ್ದ ಆರೋಪಿ ಬಾಲಕನ ತಾಯಿಯ ಬಂಧನ

"ರಾಜಸ್ಥಾನ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದು, ಅಲ್ಲಿನ ಪೊಲೀಸರು ಕೂಡ ಸ್ಥಳಕ್ಕೆ ತಲುಪಿದ್ದಾರೆ. ರಾಜ್‌ಗಢದ ಜಿಲ್ಲಾ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡಿರುವ ರೋಗಿಗಳನ್ನು ಭೋಪಾಲ್‌ಗೆ ಸ್ಥಳಾಂತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಅನೇಕ ಜನರ ಸಾವಿನ ಸುದ್ದಿ ತುಂಬಾ ದುಃಖಕರವಾಗಿದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವುದಾಗಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com