ಕಾಶ್ಮೀರ: ಪುಲ್ವಾಮಾದಲ್ಲಿ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ನಿಹಾಮಾ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆಯು ಎನ್‌ಕೌಂಟರ್‌ಗೆ ತಿರುಗಿತು. ನಂತರ ಅವರು ಪ್ರತಿಯಾಗಿ ಗುಂಡು ಹಾರಿಸಿದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಜಮ್ಮು-ಕಾಶ್ಮೀರ: ಪುಲ್ವಾಮಾದಲ್ಲಿ ಭದ್ರತಾ ಪಡೆಗಳು, ಉಗ್ರರ ನಡುವೆ ಗುಂಡಿನ ಚಕಮಕಿ; ವಿಡಿಯೋ

ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಕಾಶ್ಮೀರ ಪೊಲೀಸ್ ಮಹಾನಿರೀಕ್ಷಕ ವಿ ಕೆ ಬಿರ್ಧಿ ಅವರು ಪಿಟಿಐಗೆ ತಿಳಿಸಿದ್ದಾರೆ.

ಹತ್ಯೆಗೀಡಾದ ಭಯೋತ್ಪಾದಕರ ಗುರುತು ಮತ್ತು ಯಾವ ಉಗ್ರ ಸಂಘಟನೆಗೆ ಸೇರಿದವರು ಎಂಬದನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com