SKM ಶಾಸಕಾಂಗ ಪಕ್ಷದ ನಾಯಕರಾಗಿ ಪ್ರೇಮ್ ಸಿಂಗ್ ತಮಾಂಗ್ ಆಯ್ಕೆ

ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾದ (ಎಸ್‌ಕೆಎಂ) ಶಾಸಕಾಂಗ ಪಕ್ಷದ ನಾಯಕರಾಗಿ ಪ್ರೇಮ್ ಸಿಂಗ್ ತಮಾಂಗ್ ಆಯ್ಕೆಯಾಗಿದ್ದು, ಎರಡನೇ ಬಾರಿ ಸಿಕ್ಕಿಂ ಮುಖ್ಯಮಂತ್ರಿಯಾಗಿ ಶೀಘ್ರದಲ್ಲೇ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಪ್ರೇಮ್ ಸಿಂಗ್ ತಮಾಂಗ್
ಪ್ರೇಮ್ ಸಿಂಗ್ ತಮಾಂಗ್

ಗ್ಯಾಂಗ್‌ಟಕ್: ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾದ (ಎಸ್‌ಕೆಎಂ) ಶಾಸಕಾಂಗ ಪಕ್ಷದ ನಾಯಕರಾಗಿ ಪ್ರೇಮ್ ಸಿಂಗ್ ತಮಾಂಗ್ ಆಯ್ಕೆಯಾಗಿದ್ದು, ಎರಡನೇ ಬಾರಿ ಸಿಕ್ಕಿಂ ಮುಖ್ಯಮಂತ್ರಿಯಾಗಿ ಶೀಘ್ರದಲ್ಲೇ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಭಾನುವಾರ ರಾತ್ರಿ ಸಿಎಂ ಅಧಿಕೃತ ನಿವಾಸದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೊಸದಾಗಿ ಆಯ್ಕೆಯಾದ ಎಲ್ಲ 31 ಶಾಸಕರು ಹಾಜರಿದ್ದರು.

ಸಭೆಯಲ್ಲಿ, ಎಸ್‌ಕೆಎಂ ಪ್ರಧಾನ ಕಾರ್ಯದರ್ಶಿ ಅರುಣ್ ಉಪ್ರೇತಿ ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಸಿಎಂ ತಮಾಂಗ್ ಅವರ ಹೆಸರನ್ನು ಪ್ರಸ್ತಾಪಿಸಿದರು ಮತ್ತು ಅದನ್ನು ಪಕ್ಷದ ಶಾಸಕಿ ಸೋನಮ್ ಲಾಮಾ ಅವರು ಅನುಮೋದಿಸಿದರು.

ಪ್ರೇಮ್ ಸಿಂಗ್ ತಮಾಂಗ್
ವಿಧಾನಸಭೆ ಚುನಾವಣೆ ಫಲಿತಾಂಶ: ಅರುಣಾಚಲದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು, ಸಿಕ್ಕಿಂನಲ್ಲಿ ಎರಡನೇ ಬಾರಿ ಅಧಿಕಾರಕ್ಕೆ SKM

ನಂತರ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಎಸ್ ಕೆಎಂ ಪ್ರಕಟಣೆಯಲ್ಲಿ ತಿಳಿಸಿದೆ.

ಪಕ್ಷದ ನಾಯಕರು ತಮಾಂಗ್ ಅವರ ಆಯ್ಕೆಗೆ ಅಭಿನಂದನೆ ಸಲ್ಲಿಸಿದರು ಮತ್ತು ಅವರ ನಾಯಕತ್ವದಲ್ಲಿ ಸಮರ್ಪಣಾಭಾವದಿಂದ ಕೆಲಸ ಮಾಡುವುದಾಗಿ ಪ್ರತಿಜ್ಞೆ ಮಾಡಿದರು ಎಂದು ಪ್ರಕಟಣೆ ಹೇಳಿದೆ.

ಹಿಮಾಲಯ ರಾಜ್ಯ ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ(SKM) 32 ಸದಸ್ಯ ಬಲದ ವಿಧಾನಸಭೆಯಲ್ಲಿ 31 ಸ್ಥಾನಗಳನ್ನು ಗೆದ್ದುಕೊಂಡು ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಮರಳಿದೆ. ಪ್ರತಿಪಕ್ಷ ಎಸ್‌ಡಿಎಫ್ ಕೇವಲ ಒಂದು ಸ್ಥಾನವನ್ನು ಪಡೆದುಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com