ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶ ಎಕ್ಸಿಟ್ ಪೋಲ್‌ಗಳಲ್ಲಿ ತೋರಿಸಿರುವ ಫಲಿತಾಂಶಕ್ಕೆ ಸಂಪೂರ್ಣವಾಗಿ ವಿರುದ್ಧವಾಗಿರುತ್ತೆದೆ ಎಂದು ತುಂಬಾ ತುಂಬಾ ವಿಶ್ವಾಸ ಇದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸೋಮವಾರ ಅವರು ಹೇಳಿದ್ದಾರೆ.
ಮಂಗಳವಾರ ಪ್ರಕಟವಾಗಲಿರುವ ಫಲಿತಾಂಶದ ಬಗ್ಗೆ ತಮ್ಮ ನಿರೀಕ್ಷೆಗಳ ಬಗ್ಗೆ ಪಿಟಿಐಗೆ ಪ್ರತಿಕ್ರಿಯಿಸಿದ ಸೋನಿಯಾ ಗಾಂಧಿ, "ನಾವು ಕಾಯಬೇಕು, ಕಾದು ನೋಡಬೇಕು" ಎಂದು ಹೇಳಿದ್ದಾರೆ.
"ನಮ್ಮ ಫಲಿತಾಂಶಗಳು ಎಕ್ಸಿಟ್ ಪೋಲ್‌ಗಳು ತೋರಿಸಿರುವುದಕ್ಕೆ ಸಂಪೂರ್ಣವಾಗಿ ವಿರುದ್ಧವಾಗಿರುತ್ತದೆ ಎಂಬ ಭರವಸೆ ಇದೆ" ಎಂದು ಅವರು ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ದೊಡ್ಡ ಬಹುಮತ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಅಧಿಕಾರ ಉಳಿಸಿಕೊಳ್ಳಲಿದ್ದಾರೆ ಎಂದು ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ.
ಕೆಲವು ಎಕ್ಸಿಟ್ ಪೋಲ್‌ಗಳು ಎನ್‌ಡಿಎಗೆ 400 ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಿದರೆ, ಇನ್ನು ಕೆಲವು ಚುನಾವಣೋತ್ತರ ಸಮೀಕ್ಷೆಗಳು 350ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿವೆ. ಕೇಂದ್ರದಲ್ಲಿ ಸರ್ಕಾರ ರಚನೆಗೆ 272 ಸ್ಥಾನಗಳ ಅಗತ್ಯವಿದೆ.
Advertisement