Election Results 2024 Live Updates: ಕೇರಳದಲ್ಲಿ ಕೊನೆಗೂ ಖಾತೆ ತೆರೆದ BJP, ತ್ರಿಶೂರ್ ನಲ್ಲಿ ಸುರೇಶ್ ಗೋಪಿ ಭರ್ಜರಿ ಜಯ!

ಕೊನೆಗೂ ಕೇರಳದಲ್ಲಿ ಖಾತೆ ತೆರೆಯುವ ಬಿಜೆಪಿ ಕನಸು ನನಸಾಗಿದ್ದು, ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಸುರೇಶ್ ಗೋಪಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
Suresh Gopi wins Thrissur
ಸುರೇಶ್ ಗೋಪಿ ಭರ್ಜರಿ ಜಯ
Updated on

ತಿರುವನಂತಪುರಂ: ಕೊನೆಗೂ ಕೇರಳದಲ್ಲಿ ಖಾತೆ ತೆರೆಯುವ ಬಿಜೆಪಿ ಕನಸು ನನಸಾಗಿದ್ದು, ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಸುರೇಶ್ ಗೋಪಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಹೌದು.. ಕೇರಳದಲ್ಲಿ ಮೊದಲ ಬಾರಿಗೆ ಖಾತೆ ತೆರೆದಿದ್ದು, ತ್ರಿಶ್ಯೂರ್‌ನಲ್ಲಿ ನಟ, ಬಿಜೆಪಿ ಅಭ್ಯರ್ಥಿ ಸುರೇಶ್‌ ಗೋಪಿ (Suresh Gopi) ಜಯ ಗಳಿಸಿದ್ದಾರೆ. ಸುರೇಶ್ ಗೋಪಿ ಕಾಂಗ್ರೆಸ್‌ನ ಕೆ. ಮುರಳೀಧರನ್‌ ಮತ್ತು ಸಿಪಿಐಯ ವಿ.ಎಸ್‌. ಸುನೀಲ್‌ ಕುಮಾರ್‌ ಅವರನ್ನು ಸೋಲಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಸುರೇಶ್ ಗೋಪಿ ಬರೊಬ್ಬರಿ 69 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದು, ಇದು ಕೇರಳದಲ್ಲಿ ಬಿಜೆಪಿಯ ಮೊಟ್ಟ ಮೊದಲ ಗೆಲುವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಮುರಳೀಧರನ್ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.

Suresh Gopi wins Thrissur
Election Results 2024 Live Updates: ಕರ್ನಾಟಕದಲ್ಲಿ NDAಗೆ ಮೊದಲ ಗೆಲುವು, ಕೋಲಾರ JDS ತೆಕ್ಕೆಗೆ

ಈ ಹಿಂದಿನ ಲೋಕಸಭೆ ಚುನಾವಣೆ (2019)ಯಲ್ಲಿಯೂ ಸುರೇಶ್‌ ಗೋಪಿ ಉತ್ತಮ ಪ್ರದರ್ಶನ ತೋರಿದ್ದರು. ಶೇ. 28.19ರಷ್ಟು ಮತಗಳನ್ನು ತನ್ನದಾಗಿಸಿಕೊಂಡಿದ್ದರು. ಆ ಸಮಯದಲ್ಲಿ ಸಿಪಿಐಯ ರಾಜಾಜಿ ಮ್ಯಾಥ್ಯೂ ಥಾಮಸ್ ಶೇ. 30.85 ಮತ ಪಡೆದಿದ್ದರು. ಕಾಂಗ್ರೆಸ್‌ನ ಟಿ.ಎಸ್.ಪಾರ್ಥಪನ್ ಶೇ. 39.83ರಷ್ಟು ಮತ ಪಡೆದು ಜಯ ಗಳಿಸಿದ್ದರು. ಅವರು 4,15,089 ಮತಗಳನ್ನು ಗಳಿಸಿ 3,21,456 ಮತಗಳನ್ನು ಪಡೆದ ಸಿಪಿಐಯ ರಾಜಾಜಿ ಮ್ಯಾಥ್ಯೂ ಥಾಮಸ್ ಅವರನ್ನು ಸೋಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com