Election Results 2024: ಬಿಜೆಪಿಗೆ ಸಿಗದ ಬಹುಮತ, NDA ಮೈತ್ರಿಕೂಟದ ನಿತೀಶ್ ಕುಮಾರ್, ಚಂದ್ರಬಾಬು ನಾಯ್ದುಗೆ ಗಾಳ ಹಾಕಿದ I.N.D.I.A

ಹಾಲಿ ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗದ ಹಿನ್ನಲೆಯಲ್ಲಿ ಇತ್ತ INDIA ಒಕ್ಕೂಟದ ನಾಯಕರು NDA ಮೈತ್ರಿಕೂಟದ ನಿತೀಶ್ ಕುಮಾರ್, ಚಂದ್ರಬಾಬು ನಾಯ್ದುಗೆ ಗಾಳ ಹಾಕಿದ್ದಾರೆ.
Nitish Kumar and Chandrababu Naidu have been contacted by INDIA Alliance
ನಿತೀಶ್ ಕುಮಾರ್, ಚಂದ್ರಬಾಬು ನಾಯ್ದುಗೆ ಗಾಳ ಹಾಕಿದ I.N.D.I.A
Updated on

ನವದೆಹಲಿ: ಹಾಲಿ ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗದ ಹಿನ್ನಲೆಯಲ್ಲಿ ಇತ್ತ INDIA ಒಕ್ಕೂಟದ ನಾಯಕರು NDA ಮೈತ್ರಿಕೂಟದ ನಿತೀಶ್ ಕುಮಾರ್, ಚಂದ್ರಬಾಬು ನಾಯ್ದುಗೆ ಗಾಳ ಹಾಕಿದ್ದಾರೆ.

ಹೌದು.. 2024ರ ಲೋಕಸಭಾ ಚುನಾವಣೆಯ ಫಲಿತಾಂಶಗಳು (Election Results 2024) ಪ್ರಕಟವಾಗುತ್ತಿದ್ದು, ಬಿಜೆಪಿ (BJP) ಸ್ವತಂತ್ರವಾಗಿ ಕೇಂದ್ರದಲ್ಲಿ ಸರ್ಕಾರ ರಚಿಸುವ ಕನಸು ಮಂಕಾಗಿದೆ. ಈಗ ಬಿಜೆಪಿ ತನ್ನ ಮಿತ್ರಪಕ್ಷಗಳನ್ನೇ ನೆಚ್ಚಿಕೊಳ್ಳಬೇಕಿದ್ದು, ಎನ್‌ಡಿಎ (NDA) ಮಿತ್ರಪಕ್ಷಗಳು ಕೂಡ ಆಟವಾಡುವ ಸಾಧ್ಯತೆ ಕಾಣಿಸಿದೆ.

ಮುಖ್ಯವಾಗಿ ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು (Chandrababu Naidu) ನೇತೃತ್ವದ ತೆಲುಗುದೇಶಂ ಪಾರ್ಟಿ (TDP) ಹಾಗೂ ಬಿಹಾರದ ನಿತೀಶ ಕುಮಾರ್‌ (Nitish Kumar) ಕಿಂಗ್‌ ಮೇಕರ್‌ಗಳಾಗಲಿದ್ದಾರೆ. ಫಲಿತಾಂಶ ಗಮನಿಸಿ ಇಂಡಿಯಾ ಮೈತ್ರಿಕೂಟ (INDIA Bloc) ಕೂಡ ಚುರುಕಾಗಿದ್ದು, ಇವರಿಬ್ಬರನ್ನು ಸೆಳೆದು ಸರ್ಕಾರ ರಚಿಸಲು ಯೋಜನೆ ರೂಪಿಸುತ್ತಿದೆ.

Nitish Kumar and Chandrababu Naidu have been contacted by INDIA Alliance
Election Results 2024 Live Updates: ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ವಿರುದ್ಧ ಮೋದಿ 57,740 ಮತಗಳ ಮುನ್ನಡೆ..!

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) 283 ಸ್ಥಾನಗಳಲ್ಲಿ ಮುಂದಿದ್ದರೆ, ಇಂಡಿಯಾ ಒಕ್ಕೂಟ 221 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇತರರು 23 ಸ್ಥಾನಗಳಲ್ಲಿ ಮುಂದಿದ್ದಾರೆ. ಟ್ರೆಂಡ್‌ಗಳ ಆಧಾರದ ಮೇಲೆ ಎನ್‌ಡಿಎ 300 ಸೀಟುಗಳಿಗಿಂತ ಕೆಳಗಿಳಿಯಬಹುದು. ಬಿಜೆಪಿ ಒಂದು ಕ್ಷೇತ್ರದಲ್ಲಿ (ಸೂರತ್) ಈಗಾಗಲೇ ಗೆಲುವು ಸಾಧಿಸಿದ್ದು, 238 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೆ 543 ಸದಸ್ಯರ ಲೋಕಸಭೆಯಲ್ಲಿ ಬಹುಮತ ಗಳಿಸಲು 272 ಸೀಟು ಬೇಕು.

ನಿತೀಶ್ ಕುಮಾರ್, ಚಂದ್ರಬಾಬು ನಾಯ್ದು ಸಂಪರ್ಕಿಸಿದ INDIA ಒಕ್ಕೂಟ

ಈ ನಿಟ್ಟಿನಲ್ಲಿ ಇದೀಗ INDIA ಒಕ್ಕೂಟದ ನಾಯಕರು ಇದೀಗ ಬಿಹಾರ ಸಿಎಂ ನಿತೀಶ್ ಕುಮಾರ್ ಮತ್ತು ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ದು ಅವರನ್ನು ಸಂಪರ್ಕಿಸಿ ಒಕ್ಕೂಟಕ್ಕೆ ಸೆಳೆಯಲು ಯತ್ನ ನಡೆಸಿವೆ. ಬಿಹಾರದ 40 ಸ್ಥಾನಗಳ ಪೈಕಿ ಜೆಡಿಯು 15ರಲ್ಲಿ ಮುನ್ನಡೆ ಸಾಧಿಸಿದ್ದರೆ, ಆಂಧ್ರಪ್ರದೇಶದ 25 ಲೋಕಸಭಾ ಸ್ಥಾನಗಳಲ್ಲಿ 16ರಲ್ಲಿ ಟಿಡಿಪಿ ಮುನ್ನಡೆ ಸಾಧಿಸಿದೆ.

ಎರಡೂ ಪಕ್ಷಗಳು ಪ್ರಸ್ತುತ NDAಯಲ್ಲಿವೆ. ಹೀಗಾಗಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ ಈ ಇಬ್ಬರು ನಾಯಕರ ಕೃಪೆಯಿಂದ ನಡೆಯಬೇಕಿದ್ದು, ನಿತೀಶ್‌ ಮತ್ತು ನಾಯ್ಡು ಕಿಂಗ್‌ಮೇಕರ್‌ ಆಗಲಿದ್ದಾರೆ. ಏಕೆಂದರೆ ಅವರಿಬ್ಬರೂ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಯಾವಾಗ ಬೇಕಾದರೂ ಮೈತ್ರಿ ಬದಲಾಯಿಸುವ ಇತಿಹಾಸವನ್ನು ಉಭಯ ನಾಯಕರೂ ಹೊಂದಿದ್ದಾರೆ.

Nitish Kumar and Chandrababu Naidu have been contacted by INDIA Alliance
Election Results 2024 Live Updates: ಕರ್ನಾಟಕದಲ್ಲಿ NDAಗೆ ಮೊದಲ ಗೆಲುವು, ಕೋಲಾರ JDS ತೆಕ್ಕೆಗೆ

ಉಭಯ ನಾಯಕ ರಾಜಕೀಯ ಬದಲಾವಣೆ ಇತಿಹಾಸ

ಚಂದ್ರಬಾಬು ನಾಯ್ಡು ಅವರು 2014 ಮತ್ತು 2019ರ ನಡುವೆ ಎನ್‌ಡಿಎ ಸರ್ಕಾರದ ಭಾಗವಾಗಿದ್ದರು. 2019ರ ಲೋಕಸಭೆ ಚುನಾವಣೆಗೆ ಮೊದಲು ಎನ್‌ಡಿಎ ತೊರೆದರು. ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟಕ್ಕೆ ಸೇರಿದರು. ರಾಷ್ಟ್ರೀಯ ಚುನಾವಣೆಗಳು ಘೋಷಣೆಯಾಗುವ ಕೆಲವೇ ದಿನಗಳ ಮೊದಲು, ಮಾರ್ಚ್ 2024ರಲ್ಲಿ ಮತ್ತೆ NDAಯ ಭಾಗವಾದರು.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ 303 ಸ್ಥಾನಗಳನ್ನು ಗೆದ್ದಿದ್ದರೆ, ಎನ್‌ಡಿಎ 353 ಸ್ಥಾನಗಳನ್ನು ಪಡೆದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com