ವಾರಾಣಸಿಯಲ್ಲಿ ಕಡಿಮೆ ಮತಗಳ ಅಂತರದಲ್ಲಿ ಪ್ರಧಾನಿ ಮೋದಿ ಗೆಲುವು

ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ತಮ್ಮ ಸಮೀಪದ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಅವರನ್ನು1.5 ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ
Updated on

ನವದೆಹಲಿ: ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ತಮ್ಮ ಸಮೀಪದ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಅವರನ್ನು1.5 ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದಾರೆ. 2014 ಮತ್ತು 2019ರ ಚುನಾವಣೆಗೆ ಹೋಲಿಸಿದರೆ ಅತ್ಯಂತ ಕಡಿಮೆ ಮತಗಳ ಅಂತರದಲ್ಲಿ ಗೆದ್ದಿದ್ದಾರೆ.

ಆರಂಭದ ಕೆಲ ಸುತ್ತುಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಮುನ್ನಡೆ ಕಾಯ್ದುಕೊಂಡಿದ್ದರು. ಆದರೆ, ತದನಂತರ ಸುತ್ತುಗಳಲ್ಲಿ ಪ್ರಧಾನಿ ಮೋದಿ ಹೆಚ್ಚಿನ ಮತಗಳನ್ನು ಗಳಿಸುವ ಮೂಲಕ ಗೆಲುವಿನ ನಗೆ ಬೀರಿದರು. 2014 ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿಯೂ ಈ ಕ್ಷೇತ್ರದಿಂದ ಗೆದ್ದಿದ್ದರು. ಈ ಮೂಲಕ ಹ್ಯಾಟ್ರಿಕ್ ಗೆಲುವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಪ್ರಧಾನಿ ಮೋದಿ
ಲೋಕಸಭೆ ಚುನಾವಣೆ: ರಾಜ್ಯದಲ್ಲಿ 17 ಸ್ಥಾನಗಳಲ್ಲಿ ಬಿಜೆಪಿ, ಎರಡರಲ್ಲಿ ಜೆಡಿಎಸ್; 9 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು

ಉತ್ತರ ಪ್ರದೇಶದಲ್ಲಿ ಈ ಬಾರಿ ಕಮಲ್ ಮಾಡುವಲ್ಲಿ ಬಿಜೆಪಿ ಸೋತಿದೆ. ದೇಶದಲ್ಲಿಯೇ ಅತಿ ಹೆಚ್ಚು 80 ಸ್ಥಾನಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿ 32 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್- ಸಮಾಜವಾದಿ ಮೈತ್ರಿಕೂಟ 44 ಕ್ಷೇತ್ರಗಳಲ್ಲಿ ಜಯ ಗಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com