ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಸಾಧನೆ: ಡಿಸಿಎಂ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್ ರಾಜೀನಾಮೆ?

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಕಳಪೆ ಪ್ರದರ್ಶನದ ಹೊಣೆ ಹೊತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ.
ದೇವೇಂದ್ರ ಫಡ್ನವಿಸ್
ದೇವೇಂದ್ರ ಫಡ್ನವಿಸ್
Updated on: 

ಮುಂಬೈ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಕಳಪೆ ಪ್ರದರ್ಶನದ ಹೊಣೆ ಹೊತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾವಿಕಾಸ ಅಘಾಡಿಯ ಮೂರು ಪಕ್ಷಗಳ ಹೊರತಾಗಿ ನಾವು ಕೂಡ ಅಸ್ತಿತ್ವಕ್ಕಾಗಿ ಹೋರಾಡಬೇಕಾಗಿದೆ ಎಂದು ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

'ನಾನು ಓಡಿಹೋಗುವ ಮನುಷ್ಯನಲ್ಲ. ಈ ಸೋಲಿನ ಹೊಣೆಯನ್ನು ನಾನು ಹೊರುತ್ತೇನೆ. ಸಾರ್ವಜನಿಕರ ಮಧ್ಯೆ ಹೋಗಿ ಹೊಸದಾಗಿ ಕೆಲಸ ಮಾಡುತ್ತೇನೆ. ನಾನು ಬಿಜೆಪಿ ಸಂಘಟನೆಯನ್ನು ಬಲಪಡಿಸುವತ್ತ ಗಮನ ಹರಿಸಲು ಬಯಸುತ್ತೇನೆ ಎಂದು ಫಡ್ನವೀಸ್ ಹೇಳಿದ್ದಾರೆ. ಬಿಜೆಪಿಯ ಮಹಾರಾಷ್ಟ್ರ ಘಟಕದ ಸಭೆಯ ನಂತರ ದೇವೇಂದ್ರ ಫಡ್ನವೀಸ್ ಈ ವಿಷಯ ತಿಳಿಸಿದರು. ಬುಧವಾರವೇ ಬಿಜೆಪಿ ಮುಖಂಡರ ಸಭೆ ನಡೆದಿದ್ದು, ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಚರ್ಚೆ ನಡೆದಿದೆ.

ರಾಜ್ಯದಲ್ಲಿ ಬಿಜೆಪಿ ಕೇವಲ 9 ಸ್ಥಾನಗಳನ್ನು ಗೆದ್ದಿದ್ದರೆ, 2019ರಲ್ಲಿ ಬಿಜೆಪಿ ರಾಜ್ಯದಲ್ಲಿ 23 ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕೇವಲ 240 ಸ್ಥಾನಗಳನ್ನು ಪಡೆದಿದೆ. ಉತ್ತರ ಪ್ರದೇಶ, ಮಹಾರಾಷ್ಟ್ರ, ಬಂಗಾಳ ಮತ್ತು ರಾಜಸ್ಥಾನದಂತಹ ರಾಜ್ಯಗಳಲ್ಲಿ ಬಿಜೆಪಿ ಭಾರೀ ಹಿನ್ನಡೆ ಅನುಭವಿಸಿದೆ. ಈ ರಾಜ್ಯಗಳಿಂದ ಅದು ಹಿನ್ನಡೆ ಅನುಭವಿಸಿದ್ದು ಬಹುಮತ ತಪ್ಪಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಕೇವಲ 33 ಸ್ಥಾನಗಳನ್ನು ಗಳಿಸಿದೆ. 2019ರಲ್ಲಿ ಬಿಜೆಪಿ 62 ಸ್ಥಾನಗಳನ್ನು ಗೆದ್ದಿತ್ತು. ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಫಡ್ನವೀಸ್ ಅವರಲ್ಲದೆ ರಾಜ್ಯಾಧ್ಯಕ್ಷ ಚಂದ್ರಶೇಖರ ಬಾವನಕುಳೆ ಕೂಡ ಉಪಸ್ಥಿತರಿದ್ದರು.

ದೇವೇಂದ್ರ ಫಡ್ನವಿಸ್
ಬಿಜೆಪಿಯನ್ನು ಸೋಲಿಸಬಹುದೆಂದು ಲೋಕಸಭೆ ಚುನಾವಣೆ ಫಲಿತಾಂಶ ತೋರಿಸಿದೆ: ಉದ್ಧವ್ ಠಾಕ್ರೆ

ಸೋಲಿಗೆ ಕಾರಣಗಳ ಬಗ್ಗೆ ಸಭೆಯಲ್ಲಿ ಕೂಲಂಕುಷವಾಗಿ ಚರ್ಚಿಸಲಾಯಿತು. ಈ ಬಾರಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಒಟ್ಟಾಗಿ ರಾಜ್ಯದಲ್ಲಿ 17 ಸ್ಥಾನಗಳನ್ನು ಗೆದ್ದಿವೆ. ಈ ಅಂಕಿ ಅಂಶವು 48 ಸ್ಥಾನಗಳನ್ನು ಹೊಂದಿರುವ ರಾಜ್ಯಕ್ಕೆ ಕಡಿಮೆ. ಉದ್ಧವ್ ಠಾಕ್ರೆ ಅವರ ಶಿವಸೇನೆ, ಶರದ್ ಪವಾರ್ ಅವರ ಎನ್‌ಸಿಪಿ ಮತ್ತು ಕಾಂಗ್ರೆಸ್ ಉತ್ತಮ ಪ್ರದರ್ಶನ ನೀಡಿವೆ. ಮೂರು ಪಕ್ಷಗಳು ಸೇರಿ 30 ಸ್ಥಾನಗಳನ್ನು ಗೆದ್ದಿವೆ. ರಾಜ್ಯದಲ್ಲಿ ಎನ್‌ಡಿಎ 45 ಸ್ಥಾನ ಗೆಲ್ಲುವ ಗುರಿ ಹೊಂದಿತ್ತು ಎಂಬುದು ಗಮನಾರ್ಹ. ಫಲಿತಾಂಶವು ಅದರ ಮೂರನೇ ಒಂದು ಭಾಗದಷ್ಟು ಮಾತ್ರ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಒಟ್ಟು 13 ಸ್ಥಾನಗಳನ್ನು ಪಡೆದಿದೆ, ಇದು 2019ರಲ್ಲಿ ಅದರ ಕಾರ್ಯಕ್ಷಮತೆಯನ್ನು ಪರಿಗಣಿಸಿ ದೊಡ್ಡ ಯಶಸ್ಸಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com