
ಶ್ರೀನಗರ: ಜೈಲಿನಲ್ಲಿದ್ದುಕೊಂಡೆ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ರಾಜಕಾರಣಿ ಶೇಖ್ ಅಬ್ದುಲ್ ರಶೀದ್ ಅಲಿಯಾಸ್ ಇಂಜಿನಿಯರ್ ರಶೀದ್ ಅವರನ್ನು ಕೇಂದ್ರ ಸರ್ಕಾರ ಜನರ ತೀರ್ಪನ್ನು ಗೌರವಿಸಿ ಬಿಡುಗಡೆ ಮಾಡಬೇಕು ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಬುಧವಾರ ಆಗ್ರಹಿಸಿದ್ದಾರೆ.
ಭಯೋತ್ಪಾದನೆಗೆ ಹಣಕಾಸು ನೆರವು ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಇಂಜಿನಿಯರ್ ರಶೀದ್ ಅವರು, ಬಾರಾಮುಲ್ಲಾ ಕ್ಷೇತ್ರದಲ್ಲಿ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರ ವಿರುದ್ಧ ಕ್ಷೇತ್ರದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಈ ಕುರಿತು 'X' ನಲ್ಲಿ ಪೋಸ್ಟ್ ಮಾಡಿರುವ ಮುಫ್ತಿ, "ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದಕ್ಕಾಗಿ ಮಿಯಾನ್ ಅಲ್ತಾಫ್, ಅಗಾ ರುಹುಲ್ಲಾ, ಇಂಜಿನಿಯರ್ ರಶೀದ್ ಮತ್ತು ಹನೀಫಾ ಜಾನ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಕೇಂದ್ರ ಸರ್ಕಾರ ಜನರ ತೀರ್ಪನ್ನು ಗೌರವಿಸಿ ಇಂಜಿನಿಯರ್ ರಶೀದ್ ಅವರನ್ನು ಬಿಡುಗಡೆ ಮಾಡಬೇಕು" ಎಂದು ಹೇಳಿದ್ದಾರೆ.ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ರಶೀದ್ ಅವರನ್ನು ಬಿಡುಗಡೆ ಮಾಡುವಂತೆ ಪಿಡಿಪಿ ಮುಖ್ಯಸ್ಥೆ ಪುತ್ರಿ ಇಲ್ತಿಜಾ ಮುಫ್ತಿ ಸಹ ಒತ್ತಾಯಿಸಿದ್ದಾರೆ.
ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ರಶೀದ್ ಅವರನ್ನು ಬಿಡುಗಡೆ ಮಾಡುವಂತೆ ಪಿಡಿಪಿ ಮುಖ್ಯಸ್ಥೆ ಪುತ್ರಿ ಇಲ್ತಿಜಾ ಮುಫ್ತಿ ಸಹ ಒತ್ತಾಯಿಸಿದ್ದಾರೆ.
Advertisement