NDA ನಾಯಕರ ಸಭೆ ಅಂತ್ಯ, ಮೋದಿ ಸರ್ಕಾರ ರಚನೆಗೆ ಬೆಂಬಲ ಪತ್ರ ನೀಡಿದ ನಿತೀಶ್, ನಾಯ್ಡು

ತೀವ್ರ ಕುತೂಹಲ ಮೂಡಿಸಿದ್ದ ಎನ್ ಡಿಎ ನಾಯಕರ ಸಭೆ ಅಂತ್ಯವಾಗಿದ್ದು, ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆಗೆ ಟಿಡಿಪಿ ಹಾಗೂ ಜೆಡಿಯು ಸೇರಿದಂತೆ ಎಲ್ಲಾ ಮಿತ್ರ ಪಕ್ಷಗಳು ಒಪ್ಪಿಗೆ ಸೂಚಿಸಿವೆ.
ಮೋದಿ - ಚಂದ್ರಬಾಬು ನಾಯ್ಡು - ನಿತೀಶ್ ಕುಮಾರ್
ಮೋದಿ - ಚಂದ್ರಬಾಬು ನಾಯ್ಡು - ನಿತೀಶ್ ಕುಮಾರ್
Updated on

ನವದೆಹಲಿ: ತೀವ್ರ ಕುತೂಹಲ ಮೂಡಿಸಿದ್ದ ಎನ್ ಡಿಎ ನಾಯಕರ ಸಭೆ ಅಂತ್ಯವಾಗಿದ್ದು, ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆಗೆ ಟಿಡಿಪಿ ಹಾಗೂ ಜೆಡಿಯು ಸೇರಿದಂತೆ ಎಲ್ಲಾ ಮಿತ್ರ ಪಕ್ಷಗಳು ಒಪ್ಪಿಗೆ ಸೂಚಿಸಿವೆ.

ಮೋದಿ ಅವರು ಜೂನ್ 7 ರಂದು ಸಂಜೆ 5ಕ್ಕೆ ರಾಷ್ಟ್ರಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಮೋದಿ ಅವರಿಗೆ ಎನ್ ಡಿಎ ನಾಯಕರು ಸಾಥ್ ನೀಡಲಿದ್ದಾರೆ.

ಇಂದು ಮೋದಿ ಅಧ್ಯಕ್ಷತೆಯಲ್ಲಿ ನಡೆದ ಎನ್ ಡಿಎ ಸಭೆಯಲ್ಲಿ ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು, ಜೆಡಿಯು ಮುಖ್ಯಸ್ಥ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಶಿವಸೇನೆ ನಾಯಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಎಲ್‌ಜೆಪಿ(ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮೋದಿ - ಚಂದ್ರಬಾಬು ನಾಯ್ಡು - ನಿತೀಶ್ ಕುಮಾರ್
17ನೇ ಲೋಕಸಭೆ ವಿಸರ್ಜನೆ; ರಾಷ್ಟ್ರಪತಿಗೆ ರಾಜೀನಾಮೆ ಸಲ್ಲಿಕೆ; ಜೂನ್ 8ಕ್ಕೆ 3ನೇ ಅವಧಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸಾಧ್ಯತೆ

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಅಮಿತ್ ಶಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಕೂಡ ಈ ಸಭೆಯಲ್ಲಿ ಉಪಸ್ಥಿತರಿದ್ದರು.

ಟಿಡಿಪಿ 16, ಜೆಡಿಯು 12, ಶಿಂಧೆ ನೇತೃತ್ವದ ಶಿವಸೇನೆ 7 ಮತ್ತು ಎಲ್‌ಜೆಪಿ(ರಾಮ್ ವಿಲಾಸ್) ಐದು ಸ್ಥಾನಗಳನ್ನು ಗೆದ್ದು ಮೋದಿ ಮೂರನೇ ಬಾರಿಗೆ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿವೆ.

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ) ನಾಯಕರು ಔಪಚಾರಿಕವಾಗಿ ಮೋದಿಯವರ ನಾಯಕತ್ವವನ್ನು ಬೆಂಬಲಿಸಿದ್ದು, ಬಿಜೆಪಿ ನೇತೃತ್ವದಲ್ಲಿ ಸರ್ಕಾರ ರಚನೆಗೆ ಬೆಂಬಲ ಪತ್ರ ನೀಡಿವೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com