
ಹೈದರಾಬಾದ್: ಲೋಕಸಭೆ ಚುನಾವಣೆ ಫಲಿತಾಂಶ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ, ಜನಾದೇಶ ಕಾಂಗ್ರೆಸ್‌ಗೆ ಇದೆ ಎಂಬುದನ್ನು ಚುನಾವಣೆ ತಿಳಿಸಿದೆ. ಈ ಫಲಿತಾಂಶ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆತ್ಮವಿಶ್ವಾಸವನ್ನು ಹೆಚ್ಚಿಸಿದ್ದು, ಮತ್ತಷ್ಟು ಪರಿಣಾಮಕಾರಿ ಆಡಳಿತ ನೀಡಲು ಉತ್ತೇಜನ ನೀಡಿದೆ ಎಂದು ಹೇಳಿದರು.
ತೆಲಂಗಾಣದ ಜನರು ಕಾಂಗ್ರೆಸ್ ಸರ್ಕಾರದ 100 ದಿನಗಳ ಆಡಳಿತವನ್ನು ಒಪ್ಪಿಕೊಂಡಿದ್ದು, ಎಂಟು ಲೋಕಸಭಾ ಸ್ಥಾನಗಳನ್ನು ನೀಡಿದ್ದಾರೆ ಎಂದು ಹೇಳಿದ ಮುಖ್ಯಮಂತ್ರಿ ಸಿಕಂದರಾಬಾದ್ ಕಂಟೋನ್ಮೆಂಟ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಆಯ್ಕೆ ಮಾಡಿದ ಜನತೆಗೆ ಧನ್ಯವಾದ ಅರ್ಪಿಸಿದರು. ವಿಜೇತ ಕಾಂಗ್ರೆಸ್ ಅಭ್ಯರ್ಥಿ ಶ್ರೀಗಣೇಶ್ ಅವರನ್ನು ಸನ್ಮಾನಿಸಿದರು.
ಪಕ್ಷದ ಬೆಂಬಲಿಗರು, ಕಾರ್ಯಕರ್ತರು ಮತ್ತು ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದ ರೇವಂತ್ ರೆಡ್ಡಿ, ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಉಪಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿರುವುದು ಪಕ್ಷದ ಕಾರ್ಯಕರ್ತರ ಗೆಲುವಾಗಿದೆ. ಕಾರ್ಯಕರ್ತರ ಶ್ರಮವನ್ನು ಪಕ್ಷ ಗುರುತಿಸುತ್ತದೆ ಎಂದರು. ಬುಧವಾರ ಮಾದರಿ ನೀತಿ ಸಂಹಿತೆ (ಎಂಸಿಸಿ) ಹಿಂಪಡೆಯಲಾಗುವುದು, ಜನಪರ ಆಡಳಿತ ಮತ್ತೆ ಆರಂಭವಾಗಲಿದೆ. ಮುಂದಿನ ದಿನಗಳಲ್ಲಿ ನನ್ನ ಆಡಳಿತ ಶಾಶ್ವತವಾಗಿ ಜನರ ಹೃದಯದಲ್ಲಿ ನೆಲೆಸಲಿದೆ ಎಂದು ಹೇಳಿದರು.
Advertisement