NDA ಸರ್ಕಾರ ರಚನೆ: ಇಂದು ದೆಹಲಿಯಲ್ಲಿ ಬಿಜೆಪಿ ನಾಯಕರ ಸಭೆ, ಚರ್ಚೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ತನ್ನ ಸರಕಾರ ರಚನೆಯ ಪ್ರಯತ್ನಗಳಿಗೆ ಚಾಲನೆ ನೀಡುತ್ತಿದ್ದಂತೆ ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಗುರುವಾರ ಸಮಾಲೋಚನೆ ನಡೆಸಿದರು.
ಬಿಜೆಪಿ ಹಿರಿಯ ನಾಯಕರಾದ ರಾಜನಾಥ್ ಸಿಂಗ್, ನರೇಂದ್ರ ಮೋದಿ, ಜೆ ಪಿ ನಡ್ಡಾ ಮತ್ತು ಅಮಿತ್ ಶಾ
ಬಿಜೆಪಿ ಹಿರಿಯ ನಾಯಕರಾದ ರಾಜನಾಥ್ ಸಿಂಗ್, ನರೇಂದ್ರ ಮೋದಿ, ಜೆ ಪಿ ನಡ್ಡಾ ಮತ್ತು ಅಮಿತ್ ಶಾ
Updated on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ತನ್ನ ಸರಕಾರ ರಚನೆಯ ಪ್ರಯತ್ನಗಳಿಗೆ ಚಾಲನೆ ನೀಡುತ್ತಿದ್ದಂತೆ ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಗುರುವಾರ ಸಮಾಲೋಚನೆ ನಡೆಸಿದರು.

ಇಂದು ಬೆಳಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ನಿವಾಸದಲ್ಲಿ ಭೇಟಿಯಾದ ಬಿಜೆಪಿ ಹಿರಿಯ ನಾಯಕರು, ಮುಂಬರುವ ಸರ್ಕಾರದಲ್ಲಿ ಮಂತ್ರಿಮಂಡಲ ರಚನೆ, ಖಾತೆಗಳ ಹಂಚಿಕೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಎನ್‌ಡಿಎ ಸಂಸದರು ನಾಳೆ ದೆಹಲಿಯಲ್ಲಿ ಸಭೆ ಸೇರಿ ಮೋದಿ ಅವರನ್ನು ತಮ್ಮ ನಾಯಕನನ್ನಾಗಿ ಔಪಚಾರಿಕವಾಗಿ ಆಯ್ಕೆ ಮಾಡಲಿದ್ದು, ವಾರಾಂತ್ಯದಲ್ಲಿ ಜೂನ್ 8ರಂದು ಹೊಸ ಸರ್ಕಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

ಸಮ್ಮಿಶ್ರ ಸರ್ಕಾರದ ಮುಖ್ಯಸ್ಥರಾಗಿ ಸತತ ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಲು ಸಿದ್ಧತೆ ನಡೆಸುತ್ತಿರುವ ಮೋದಿ ಅವರು ನಿನ್ನೆ ಆಡಳಿತಾರೂಢ ಮೈತ್ರಿಕೂಟದ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿದ್ದರು, ಅದರಲ್ಲಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಬಿಜೆಪಿ ಹಿರಿಯ ನಾಯಕರಾದ ರಾಜನಾಥ್ ಸಿಂಗ್, ನರೇಂದ್ರ ಮೋದಿ, ಜೆ ಪಿ ನಡ್ಡಾ ಮತ್ತು ಅಮಿತ್ ಶಾ
NDA ಮೈತ್ರಿ ಸರ್ಕಾರದಲ್ಲಿ ಖಾತೆ ಹಂಚಿಕೆ ಸವಾಲು: 6 ಖಾತೆಗಳ ಬಿಟ್ಟುಕೊಡಲು ಬಿಜೆಪಿಗೆ ಸುತಾರಾಂ ಇಷ್ಟವಿಲ್ಲ!

ಬಿಜೆಪಿಯ ಮಿತ್ರಪಕ್ಷ ಸಂಯುಕ್ತ ಜನತಾದಳ ನಾಯಕರು ಪಕ್ಷದ ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಸಮಾಲೋಚನೆ ನಡೆಸಿದರು. ಪ್ರಾದೇಶಿಕ ಪಕ್ಷವು ಈ ವಿಷಯದ ಬಗ್ಗೆ ಅಧಿಕೃತವಾಗಿ ಏನನ್ನೂ ಹೇಳದಿದ್ದರೂ, ಬಿಹಾರದಲ್ಲಿ ಕಳೆದುಹೋದ ಕೆಲವು ಸ್ಥಾನಗಳನ್ನು ಮರಳಿ ಪಡೆಯಲು ಕೆಲವು ಪ್ರಮುಖ ಸಚಿವ ಸ್ಥಾನಗಳನ್ನು ಪಡೆಯಲು ಪ್ರಯತ್ನಿಸುತ್ತಿದೆ ಎಂದು ಮೂಲಗಳು ತಿಳಿಸಿವೆ, ಅಲ್ಲಿ ಬಿಜೆಪಿಗಿಂತ ಉತ್ತಮ ಸೀಟು ಗೆದ್ದುಕೊಂಡಿದೆ.

12 ಸಂಸದರನ್ನು ಹೊಂದಿರುವ ಜೆಡಿಯು ತೆಲುಗು ದೇಶಂ ಪಕ್ಷದ 16 ಸಂಸದರ ನಂತರ ಎರಡನೇ ಅತಿದೊಡ್ಡ ಬಿಜೆಪಿ ಮಿತ್ರ ಪಕ್ಷವಾಗಿದೆ. ಬಿಜೆಪಿ ನೇತೃತ್ವದ ಹೊಸ ಸರ್ಕಾರವು ಉಳಿವು ಈ ಎರಡು ಪಕ್ಷಗಳ ಮೇಲೆ ನಿರ್ಣಾಯಕ ಅವಲಂಬಿತವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com