ಆಂಧ್ರ ಪ್ರದೇಶ: ಚಂದ್ರಬಾಬು ನಾಯ್ಡು ಸಿಎಂ ಪದಗ್ರಹಣ ಸಮಾರಂಭ ಮುಂದೂಡಿಕೆ!

ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಟಿಡಿಪಿ ಮುಖ್ಯಸ್ಥ ಎನ್​ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಎನ್.ಚಂದ್ರಬಾಬು ನಾಯ್ಡು
ಎನ್.ಚಂದ್ರಬಾಬು ನಾಯ್ಡು

ನವದೆಹಲಿ: ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಟಿಡಿಪಿ ಮುಖ್ಯಸ್ಥ ಎನ್​ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಚಂದ್ರಬಾಬು ಅವರು ಜೂನ್ 9 ರಂದು ಅಮರಾವತಿಯಲ್ಲಿ ಪ್ರಮಾಣವಚನ ಸ್ವೀಕರಿಸಬೇಕಿತ್ತು. ಆದರೆ, ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿರುವುದರಿಂದ ಚಂದ್ರಬಾಬು ಪ್ರಮಾಣ ವಚನ ಸ್ವೀಕಾರ ಕೊಂಚ ತಡವಾಗಿದೆ.

ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಜೂನ್ 9 ರ ಬದಲು ಜೂನ್ 12 (ಬುಧವಾರ) ಕ್ಕೆ ಮುಂದೂಡಲಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಈ ಹಿಂದೆ ನಾಯ್ಡು ಅವರು ಜೂನ್ 9 ರಂದು ಆಂಧ್ರಪ್ರದೇಶ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿತ್ತು. ಜೂನ್ 8 ರಂದು ಸತತ ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕಾರಣ ನಾಯ್ಡು ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕದಲ್ಲಿ ಬದಲಾವಣೆಯಾಗಿದೆ. ಇದರೊಂದಿಗೆ ಚಂದ್ರಬಾಬು ನಾಯ್ಡು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಲಿದ್ದಾರೆ. ಅವರು ಮೊದಲ ಬಾರಿಗೆ 1995 ರಿಂದ 1999 ರವರೆಗೆ ಮತ್ತು ನಂತರ 1999 ರಿಂದ 2004 ರವರೆಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. 2014 ರಲ್ಲಿ ರಾಜ್ಯ ವಿಭಜನೆಯ ನಂತರ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಅವರ ಮೂರನೇ ಅವಧಿ ಪೂರೈಸಿದರು.

ಎನ್.ಚಂದ್ರಬಾಬು ನಾಯ್ಡು
ಕುತೂಹಲ ಕೆರಳಿಸಿದ ಡಿಕೆಶಿ-ಚಂದ್ರಬಾಬು ನಾಯ್ಡು ಭೇಟಿ: ಆಂಧ್ರಪ್ರದೇಶದಲ್ಲೂ ಶುರುವಾಯಿತೇ ತಂತ್ರಗಾರಿಕೆ?

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com