
ಪಾಟ್ನ: ಬಿಹಾರದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಚುನಾವಣೆಯನ್ನು ನಿತೀಶ್ ಕುಮಾರ್ ನೇತೃತ್ವದಲ್ಲೇ ಎದುರಿಸುವುದಾಗಿ ಬಿಹಾರ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಹೇಳಿದ್ದಾರೆ.
ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಎನ್ ಡಿಎ ಭಾಗವಾಗಿರುವ ಜನತಾದಳ (ಯುನೈಟೆಡ್) 16 ಸ್ಥಾನಗಳಲ್ಲಿ ಸ್ಪರ್ಧಿಸಿ 12 ರಲ್ಲಿ ಗೆಲುವು ಸಾಧಿಸಿದೆ. ಕೇಂದ್ರದಲ್ಲಿ ಬಿಜೆಪಿ ಸ್ವತಂತ್ರವಾಗಿ ಸರ್ಕಾರ ರಚನೆ ಮಾಡುವಷ್ಟು ಸಂಖ್ಯೆಯನ್ನು ಪಡೆದಿಲ್ಲ. ದೇಶದಲ್ಲಿನ ಇಂತಹ ಪರಿಸ್ಥಿತಿಯಲ್ಲಿ ಎನ್ ಡಿಎ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಬೆಂಬಲ ಮುಖ್ಯವಾಗಿದ್ದು, ಬಿಹಾರದಲ್ಲಿ ನಿತೀಶ್ ಕುಮಾರ್ ನಾಯಕತ್ವ ನಿರ್ಣಾಯಕವಾಗಿದೆ.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸಾಮ್ರಾಟ್ ಚೌಧರಿ, ಮುಂಬರುವ ವಿಧಾನಸಭಾ ಚುನಾವಣೆಯನ್ನು ನಿತೀಶ್ ನೇತೃತ್ವದಲ್ಲೇ ಎದುರಿಸುವುದಾಗಿ ಬಿಹಾರ ಡಿಸಿಎಂ ಕೂಡ ಆಗಿರುವ ಸಾಮ್ರಾಟ್ ಚೌಧರಿ ಹೇಳಿದ್ದಾರೆ.
ನಿತೀಶ್ ಕುಮಾರ್ 2000 ರಲ್ಲಿ ಮೊದಲ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು.
Advertisement