ನಕಲಿ ಆಧಾರ್ ಕಾರ್ಡ್ ಬಳಸಿ ಸಂಸತ್ ಭವನ ಪ್ರವೇಶ : ಭದ್ರತಾ ಸಿಬ್ಬಂದಿಯಿಂದ ಮೂವರ ಬಂಧನ

ನಕಲಿ ಆಧಾರ್‌ ಕಾರ್ಡ್‌ ಬಳಸಿ ಸಂಸತ್‌ ಭವನಕ್ಕೆ ಎಂಟ್ರಿ ಕೊಡಲು ಯತ್ನಿಸಿದ್ದ ಮೂವರನ್ನು ಭದ್ರತಾ ಪಡೆ ಬಂಧಿಸಿದೆ. ಇವರು ಕಳೆದ ಮೂರು ತಿಂಗಳಿಂದಲೂ ಸಂಸತ್ತಿನ ಸಂಕೀರ್ಣದಲ್ಲಿ ಕೆಲಸ ಮಾಡುತ್ತಿದ್ದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರಸಂಗ್ರಹ ಚಿತ್ರ
Updated on

ನವದೆಹಲಿ: ನಕಲಿ ಆಧಾರ್‌ ಕಾರ್ಡ್‌ ಬಳಸಿ ಸಂಸತ್‌ ಭವನಕ್ಕೆ ಎಂಟ್ರಿ ಕೊಡಲು ಯತ್ನಿಸಿದ್ದ ಮೂವರನ್ನು ಭದ್ರತಾ ಪಡೆ ಬಂಧಿಸಿದೆ. ಇವರು ಕಳೆದ ಮೂರು ತಿಂಗಳಿಂದಲೂ ಸಂಸತ್ತಿನ ಸಂಕೀರ್ಣದಲ್ಲಿ ಕೆಲಸ ಮಾಡುತ್ತಿದ್ದರು.

ಬಂಧಿತರನ್ನು ಖಾಸಿಂ, ಮೋನೀಶ್‌ ಮತ್ತು ಸೋಯೆಬ್‌ ಎಂದು ಗುರುತಿಸಲಾಗಿದೆ. ಗುರುವಾರ ಭದ್ರತಾ ಸಿಬ್ಬಂದಿ ನಿತ್ಯದ ನಡೆಸುವಂತೆ ತಪಾಸಣೆ ವೇಳೆ ಈ ಮೂರು ಕಾರ್ಮಿಕರು ನಕಲಿ ಆಧಾರ್‌ ಕಾರ್ಡ್‌ ಹೊಂದಿರುವುದು ಪತ್ತೆಯಾಗಿದೆ. ಸಂಸತ್‌ ಭವನದ ಎದುರು ನಿಯೋಜನೆಗೊಂಡಿರುವ CISF ಭದ್ರತಾ ಸಿಬ್ಬಂದಿ ಮೂವರನ್ನು ತಪಾಸಣೆ ನಡೆಸಿದಾಗ ಇವರ ಬಳಿ ನಕಲಿ ಆಧಾರ್‌ ಕಾರ್ಡ್‌ ಇರುವುದು ಕಂಡು ಬಂದಿದ್ದು, ತಕ್ಷಣ ಅವರನ್ನು ವಶಕ್ಕೆ ಪಡೆದಿದ್ದಾರೆ.

ಇನ್ನು ಆರೋಪಿಗಳ ವಿರುದ್ಧ ಫೋರ್ಜರಿ ಮತ್ತು ವಂಚನೆ ಪ್ರಕರಣ ದಾಖಲಿಸಿ ತನಿಖೆಗೊಳಪಡಿಸಲಾಗಿದೆ. ಇದರ ಬೆನ್ನಲ್ಲೇ CISF ಸಿಬ್ಬಂದಿ ಹಾಗೂ ದೆಹಲಿ ಪೊಲೀಸರು ಸಂಸತ್‌ ಭವನದ ಸಂಪೂರ್ಣ ಭದ್ರತೆಯನ್ನು ಮರುಪರಿಶೀಲಿಸಿದ್ದಾರೆ.

ಸಂಗ್ರಹ ಚಿತ್ರ
ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಆಪ್ತರಿಬ್ಬರ ಬಂಧನ

ಇನ್ನು ಈ ಮೂವರು ನೌಕರರು ಡೀ ವೀ ಪ್ರಾಜೆಕ್ಟ್‌ ಲಿಮಿಟೆಡ್‌ ನಿಯೋಜಿಸಿರುವ ಗುತ್ತಿಗೆ ನೌಕರರಾಗಿದ್ದು, ಇವರು ಸಂಸತ್‌ ಭವನದ ಒಳಗೆ ಕಟ್ಟಡ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. IPC ಸೆಕ್ಷನ್‌ಗಳು 465 (ನಕಲಿ), 419 (ವ್ಯಕ್ತಿತ್ವದಿಂದ ವಂಚನೆ), 120B (ಅಪರಾಧದ ಪಿತೂರಿ), 471 (ನಕಲಿ ದಾಖಲೆಯನ್ನು ಅಸಲಿ ಎಂದು ಬಳಸುವುದು), ಮತ್ತು 468 (ವಂಚನೆಯ ಉದ್ದೇಶಕ್ಕಾಗಿ ನಕಲಿ) ಅಡಿಯಲ್ಲಿ ಮೂವರ ಮೇಲೂ FIR ದಾಖಲಿಸಲಾಗಿದೆ.

ವಿಚಾರಣೆ ವೇಳೆ, ತಾವು ಉತ್ತರ ಪ್ರದೇಶದ ನಿವಾಸಿಗಳಾಗಿದ್ದು, ಕಳೆದ ಮೂರು ತಿಂಗಳಿಂದ ಸಂಸತ್ತಿನ ಸಂಕೀರ್ಣದಲ್ಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ಅವರು ಬಹಿರಂಗಪಡಿಸಿದ್ದಾರೆ. ಜೂನ್ 4 ರಂದು ಅವರ ಪ್ರವೇಶ ಪಾಸ್ ಅವಧಿ ಮುಗಿದಿದೆ ಮತ್ತು ಅವರು ಹೊಸದನ್ನು ನೀಡುವಂತೆ ಭದ್ರತಾ ಸಿಬ್ಬಂದಿ ಕೇಳಿದ್ದಾರೆ. ಆದರೆ ಮೋನಿಸ್ ಮತ್ತು ಕಾಸಿಂ ಬಳಿ ಆಧಾರ್ ಕಾರ್ಡ್‌ ಇರಲಿಲ್ಲ, ಆದ್ದರಿಂದ ಅವರು ಸೋಯಾಬ್‌ನ ಕಾರ್ಡ್‌ನಲ್ಲಿ ಪ್ರವೇಶಕ್ಕಾಗಿ ತಮ್ಮ ಚಿತ್ರಗಳನ್ನು ಹಾಕಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com