ಮೋದಿ ಪ್ರಮಾಣ ವಚನದ ನಂತರ ಸಿಎಂ ಆಯ್ಕೆ ಸಾಧ್ಯತೆ: ಒಡಿಶಾ ಬಿಜೆಪಿ ಅಧ್ಯಕ್ಷ

ನರೇಂದ್ರ ಮೋದಿ ಅವರು ಭಾನುವಾರ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಬಿಜೆಪಿ ಸಂಸದೀಯ ಪಕ್ಷ ಒಡಿಶಾ ಮುಖ್ಯಮಂತ್ರಿಯ ಆಯ್ಕೆ.
ಮನಮೋಹನ್ ಸಮಾಲ್
ಮನಮೋಹನ್ ಸಮಾಲ್
Updated on: 

ಭುವನೇಶ್ವರ: ನರೇಂದ್ರ ಮೋದಿ ಅವರು ಭಾನುವಾರ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಬಿಜೆಪಿ ಸಂಸದೀಯ ಪಕ್ಷ ಒಡಿಶಾ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ಒಡಿಶಾ ಬಿಜೆಪಿ ಅಧ್ಯಕ್ಷ ಮನಮೋಹನ್ ಸಮಾಲ್ ಅವರು ಶನಿವಾರ ಹೇಳಿದ್ದಾರೆ.

ಇಂದು ದೆಹಲಿಯಿಂದ ರಾಜ್ಯಕ್ಕೆ ಮರಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಮಾಲ್, "ಇನ್ನೂ ಎರಡು ದಿನ ಕಾಯಿರಿ" ಎಂದು ಹೇಳಿದರು.

147 ಸದಸ್ಯ ಬಲದ ಒಡಿಶಾ ವಿಧಾನಸಭೆಯಲ್ಲಿ ಬಿಜೆಪಿ 78 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದುಕೊಂಡಿದೆ.

ಬಿಜೆಪಿಯ ಸಂಸದೀಯ ಪಕ್ಷ ತನ್ನ ಸಭೆಯಲ್ಲಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುತ್ತದೆ ಎಂದು ಸಮಲ್ ತಿಳಿಸಿದ್ದಾರೆ.

ಮನಮೋಹನ್ ಸಮಾಲ್
ಒಡಿಶಾ: ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಸಾವು, ನಾಲ್ವರ ರಕ್ಷಣೆ

"ರಾಜ್ಯದ ಮುಂದಿನ ಮುಖ್ಯಮಂತ್ರಿಯ ಬಗ್ಗೆ ನನಗೆ ಯಾವುದೇ ಕಲ್ಪನೆ ಇಲ್ಲ". "ಎನ್‌ಡಿಎ ಸಂಸದೀಯ ಪಕ್ಷದ ನಾಯಕರ ಮತ್ತು ಲೋಕಸಭೆಯ ನಾಯಕರನ್ನು ಆಯ್ಕೆ ಮಾಡುವ ಸಭೆಯಲ್ಲಿ ಪಾಲ್ಗೊಳ್ಳಲು ನಾನು ದೆಹಲಿಗೆ ಹೋಗಿದ್ದೆ. ರಾಜ್ಯದಿಂದ ಹೊಸದಾಗಿ ಆಯ್ಕೆಯಾದ ಎಲ್ಲಾ ಸಂಸದರು ಹಾಜರಿದ್ದರು. ನಾವು ದೆಹಲಿಯಲ್ಲಿ ಏರ್ಪಡಿಸಿದ್ದ ಪಕ್ಷದ ಇತರ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇವೆ" ಎಂದು ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ವರದಿಗಾರರಿಗೆ ತಿಳಿಸಿದರು.

ಒಡಿಶಾದ 21 ಲೋಕಸಭಾ ಸ್ಥಾನಗಳ ಪೈಕಿ ಬಿಜೆಪಿ 20ರಲ್ಲಿ ಗೆಲುವು ಸಾಧಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com