CWC ಸಭೆ: ಚುನಾವಣೆ ಫಲಿತಾಂಶ ಪರಾಮರ್ಶೆ; ವಿಪಕ್ಷ ನಾಯಕ ಸ್ಥಾನ ವಹಿಸಲು ರಾಹುಲ್ ಗಾಂಧಿಗೆ ಒತ್ತಡ

ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಳ್ಳುವಂತೆ ಪಕ್ಷದ ನಾಯಕರು ಪ್ರಬಲವಾಗಿ ಪ್ರಸ್ತಾಪ ಮಂಡಿಸಲಿದ್ದಾರೆ. ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕನಾದರೆ ಕಾಂಗ್ರೆಸ್ ಪಕ್ಷಕ್ಕೂ ಮುಂದಿನ ದಿನಗಳಲ್ಲಿ ಬಲವಾಗಲಿದೆ ಎಂಬ ಮಾತು ಬಹುತೇಕ ಕಾಂಗ್ರೆಸ್ ನಾಯಕರದ್ದಾಗಿದೆ.
ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ
ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ
Updated on

ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಕಾಂಗ್ರೆಸ್ ಲೋಕಸಭೆಯಲ್ಲಿ 99 ಸ್ಥಾನಗಳನ್ನು ಪಡೆದಿದ್ದು 2014ರಿಂದ ಅತಿ ಹೆಚ್ಚಿನ ಸ್ಥಾನಗಳ ಗೆಲುವು ಈ ಬಾರಿ ಕಂಡಿದೆ. ಇಂದು ಶನಿವಾರ ಸಂಜೆ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆ ದೆಹಲಿಯಲ್ಲಿ ನಡೆಯಲಿದ್ದು, ಅದಕ್ಕೂ ಮುನ್ನ ಬೆಳಗ್ಗೆ ದೆಹಲಿಯ ಅಶೋಕ ಹೊಟೇಲ್ ನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆದಿದೆ.

ಅದರಲ್ಲಿ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಳ್ಳುವಂತೆ ಪಕ್ಷದ ನಾಯಕರು ಪ್ರಬಲವಾಗಿ ಪ್ರಸ್ತಾಪ ಮಂಡಿಸಲಿದ್ದಾರೆ. ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕನಾದರೆ ಕಾಂಗ್ರೆಸ್ ಪಕ್ಷಕ್ಕೂ ಮುಂದಿನ ದಿನಗಳಲ್ಲಿ ಬಲವಾಗಲಿದೆ ಎಂಬ ಮಾತು ಬಹುತೇಕ ಕಾಂಗ್ರೆಸ್ ನಾಯಕರದ್ದಾಗಿದೆ.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ವಯನಾಡ್ ಮತ್ತು ರಾಯ್ ಬರೇಲಿ ಎರಡೂ ಕ್ಷೇತ್ರಗಳಿಂದ ಗೆದ್ದಿರುವ ರಾಹುಲ್ ಗಾಂಧಿ ಅವರಿಗೆ ಸಿಪಿಪಿ ಸಭೆ ಮತ್ತು ದೆಹಲಿಯಲ್ಲಿ ನಡೆಯುತ್ತಿರುವ ವಿಸ್ತೃತ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪ್ರಮುಖ ಪಾತ್ರ ವಹಿಸಲು ಕಾಂಗ್ರೆಸ್ ನ ಹಿರಿಯ ನಾಯಕರು ತೀವ್ರ ಒತ್ತಡ ಹೇರಲಿದ್ದಾರೆ ಎಂದು ಪಕ್ಷದ ಮೂಲಗಳು ಸೂಚಿಸುತ್ತವೆ.

ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರೇ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ, ಏಕೆಂದರೆ ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ವಿರೋಧ ಪಕ್ಷಗಳಲ್ಲಿ ಕಾಂಗ್ರೆಸ್ ಪಕ್ಷವು ವಿರೋಧ ಪಕ್ಷದ ಅಗತ್ಯ ಸಂಖ್ಯೆಯ ಸ್ಥಾನಗಳನ್ನು ಪಡೆದುಕೊಂಡಿದೆ.

ರಾಹುಲ್ ಗಾಂಧಿಯವರು ವಿರೋಧ ಪಕ್ಷದ ನಾಯಕರಾಗಬೇಕೆಂಬುದು 140 ಕೋಟಿ ಭಾರತೀಯರ ಬೇಡಿಕೆಯಾಗಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಇಂದು ದೆಹಲಿಯಲ್ಲಿ ಸಿಡಬ್ಲ್ಯುಸಿ ಸಭೆಗೆ ಆಗಮಿಸಿದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ. ಸಿಡಬ್ಲ್ಯುಸಿ ಸಭೆಯ ಅಜೆಂಡಾ ನಮಗೆ ಇನ್ನೂ ತಿಳಿದಿಲ್ಲ. ನಮ್ಮ ಬೇಡಿಕೆ 140 ಕೋಟಿ ಭಾರತೀಯರ ಬೇಡಿಕೆಯಾಗಿದೆ. ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ತೆಗೆದುಕೊಳ್ಳಬೇಕು. ರಾಹುಲ್ ಗಾಂಧಿ ಅವರು ಮಹಿಳೆಯರು, ನಿರುದ್ಯೋಗಿಗಳು, ಬಡವರ ಪರ ಹೋರಾಡುತ್ತಿದ್ದಾರೆ ಎಂದರು.

ಲೋಕಸಭೆ ಮತ್ತು ರಾಜ್ಯಸಭೆಯ ಪಕ್ಷದ ಸಂಸದರ ಸಭೆಯಲ್ಲಿ ಕೆಸಿ ವೇಣುಗೋಪಾಲ್, ಮಾಣಿಕ್ಕಂ ಠಾಗೋರ್ ಮತ್ತು ಗೌರವ್ ಗೊಗೊಯ್ ಸೇರಿದಂತೆ ಪಕ್ಷದ ಸಂಸದರು ಕೈ ಎತ್ತುವ ಮೂಲಕ ಬೇಡಿಕೆಯನ್ನು ಸಲ್ಲಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ವಯನಾಡು ಮತ್ತು ರಾಯ್‌ಬರೇಲಿಯಿಂದ ಲೋಕಸಭೆ ಚುನಾವಣೆಯಲ್ಲಿ ಗೆದ್ದಿರುವ ರಾಹುಲ್ ಗಾಂಧಿ ಅವರ ಹೆಸರನ್ನು 18ನೇ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಲು ಹಲವು ಕಾಂಗ್ರೆಸ್ ಸಂಸದರು ಮುಂದಿಟ್ಟಿದ್ದಾರೆ ಎಂದು TNIE(The New Indian Express) ಈ ಹಿಂದೆ ವರದಿ ಮಾಡಿತ್ತು.

TNIE ಯೊಂದಿಗೆ ಮಾತನಾಡಿದ ಗೊಗೊಯ್, ಸಂವಿಧಾನವನ್ನು ರಕ್ಷಿಸಲು ಮಾಜಿ ಎಐಸಿಸಿ ಅಧ್ಯಕ್ಷರ ಸಮರ್ಪಣೆ ದೇಶದ ಮೂಲೆ ಮೂಲೆಗಳಲ್ಲಿ ಪ್ರತಿಧ್ವನಿಸುತ್ತಿದೆ. ಆದ್ದರಿಂದ ಅವರು ಸಂಸತ್ತಿನಲ್ಲಿ ಪಕ್ಷವನ್ನು ಮುನ್ನಡೆಸಲು ಸೂಕ್ತ ವ್ಯಕ್ತಿ. ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಸಂಸದೀಯ ಪಕ್ಷ ತೆಗೆದುಕೊಳ್ಳುತ್ತದೆ ಎಂದರು.

ಕಾಂಗ್ರೆಸ್ ಸಂವಿಧಾನದ ಪ್ರಕಾರ, ಸಂಸತ್ತಿನ ಉಭಯ ಸದನಗಳಲ್ಲಿ ಪಕ್ಷದ ನಾಯಕರನ್ನು ಹೆಸರಿಸಲು ಸಂಸದೀಯ ಪಕ್ಷದ ಅಧ್ಯಕ್ಷರಿಗೆ ಅಧಿಕಾರವಿದೆ. ಸೋನಿಯಾ ಗಾಂಧಿ ಅವರು ಸಿಪಿಪಿ ಅಧ್ಯಕ್ಷರಾಗಿ ಮರು ಆಯ್ಕೆಯಾಗುವ ಸಾಧ್ಯತೆಯಿದೆ.

ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ಪಕ್ಷದ ನಾಯಕರನ್ನಾಗಿ ಮಾಡಲು ನಿರ್ಧರಿಸಿದರೆ ಅಥವಾ ಬೇರೆ ನಾಯಕರನ್ನು ಆಯ್ಕೆ ಮಾಡಿದರೆ ಅದು ಸೋನಿಯಾ ಗಾಂಧಿ ಅವರ ಮೇಲೆ ಅವಲಂಬಿತವಾಗಿರುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸಂಸತ್ತಿನ ಮೇಲ್ಮನೆಯ ವಿರೋಧ ಪಕ್ಷದ ನಾಯಕರಾಗಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮುಂದುವರಿಯುವ ಸಾಧ್ಯತೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com