
ಫರಿದಾಬಾದ್: ಹರಿಯಾಣದ ಫರಿದಾಬಾದ್ ಜಿಲ್ಲೆಯಲ್ಲಿ 35 ವರ್ಷದ ವ್ಯಕ್ತಿಯೊಬ್ಬರು ಪಾಕಿಸ್ತಾನದ ಫೋನ್ ನಂಬರ್ ನೊಂದಿಗೆ ವಾಟ್ಸಾಪ್ ಚಾಟ್ ಮಾಡಿದ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ಮತ್ತು ಶನಿವಾರ ಮಧ್ಯರಾತ್ರಿ ನಾವಡ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತನನ್ನು ಅರುಣ್ ಎಂದು ಗುರುತಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಅರುಣ್‌ನ ಕಿರಿಯ ಸಹೋದರ ಅನುಜ್ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಶನಿವಾರ ಬೆಳಗಿನ ಜಾವ 4.30ರ ಸುಮಾರಿಗೆ ಅರುಣ್ ತಾಯಿ ಕೋಣೆಗೆ ಹೋದಾಗ, ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನೋಡಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಅರುಣ್ ಅವರ ಮೊಬೈಲ್ ಫೋನ್ ಪರಿಶೀಲಿಸಿದಾಗ, ಅವರು ಪಾಕಿಸ್ತಾನದ ಫೋನ್ ನಂಬರ್ ನೊಂದಿಗೆ ವಾಟ್ಸಾಪ್‌ನಲ್ಲಿ ಚಾಟ್ ಮಾಡುತ್ತಿರುವುದು ಕಂಡುಬಂದಿದೆ ಮತ್ತು ಅರುಣ್ ಆತ್ಮಹತ್ಯೆಗೆ ಪ್ರೇರೇಪಿಸುತ್ತಿರುವುದು ಕಂಡುಬಂದಿದೆ ಎಂದು ಅನುಜ್ ಅವರು ದೂರಿನಲ್ಲಿ ತಿಳಿಸಿದ್ದಾರೆ.
Advertisement