
ನವದೆಹಲಿ: ಭಾನುವಾರ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬಣಕ್ಕೆ ಆಹ್ವಾನ ನೀಡಿಲ್ಲ. ಹೀಗಾಗಿ ಸಮಾರಂಭದಲ್ಲಿ ನಾವು ಭಾಗವಹಿಸುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.
ಜೂನ್ 9 ರಂದು ನಡೆಯುವ ಕಾರ್ಯಕ್ರಮಕ್ಕೆ ಹಾಜರಾಗಲು ಇಂಡಿಯಾ ಬ್ಲಾಕ್‌ಗೆ ಇನ್ನೂ ಆಹ್ವಾನ ಬಂದಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಹೇಳಿದ್ದಾರೆ.
"ನಮಗೆ ಯಾವುದೇ ಆಹ್ವಾನ ಬಂದಿಲ್ಲ. ಹಾಗಾಗಿ, ಇಂಡಿಯಾ ಬ್ಲಾಕ್ ಈವೆಂಟ್‌ಗೆ ಹಾಜರಾಗುವುದಿಲ್ಲ" ಎಂದು ಅವರು ಜೈರಾಮ್ ರಮೇಶ್ ಅವರು ತಿಳಿಸಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಅಂತರಾಷ್ಟ್ರೀಯ ನಾಯಕರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ನಮ್ಮ ನಾಯಕರಿಗೆ ಇನ್ನೂ ಆಹ್ವಾನ ಬಂದಿಲ್ಲ. ನಮ್ಮ ಇಂಡಿಯಾ ಮೈತ್ರಿಕೂಟದ ನಾಯಕರಿಗೆ ಆಹ್ವಾನ ಬಂದಾಗ, ನಾವು ಅದರ ಬಗ್ಗೆ ಯೋಚಿಸುತ್ತೇವೆ ಎಂದು ಜೈರಾಮ್ ರಮೇಶ್ ಅವರು ಹೇಳಿದ್ದಾರೆ.
ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಮರು ಆಯ್ಕೆಯಾದ ನಂತರ ಸರ್ಕಾರ ರಚಿಸುವ ಎನ್‌ಡಿಎ ಹಕ್ಕನ್ನು ಪ್ರಶ್ನಿಸಿದ್ದರು.
ಪಕ್ಷ ಮತ್ತು ಅದರ ಮಿತ್ರಪಕ್ಷಗಳೆರಡನ್ನೂ ಹೊರಗಿಟ್ಟು ಕೇವಲ ತಮ್ಮ ಹೆಸರಿನಲ್ಲಿ ಜನಾದೇಶವನ್ನು ಬಯಸಿದ್ದ ಮೋದಿ ರಾಜಕೀಯ ಮತ್ತು ನೈತಿಕ ಸೋಲನ್ನು ಅನುಭವಿಸಿದ್ದಾರೆ. ವಾಸ್ತವದಲ್ಲಿ ಅವರು ಜನಾದೇಶವನ್ನು ಕಳೆದುಕೊಂಡಿದ್ದಾರೆ ಮತ್ತು ಆ ಮೂಲಕ ನಾಯಕತ್ವದ ಹಕ್ಕನ್ನೂ ಕಳೆದುಕೊಂಡಿದ್ದಾರೆ. ಆದರೂ ಮತ್ತೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲು ಉದ್ದೇಶಿಸಿದ್ದಾರೆ” ಎಂದು ಅವರು ಹೇಳಿದರು.
Advertisement