

ಛತ್ತೀಸ್‌ಗಢ: ಛತ್ತೀಸ್‌ಗಢದ ಕೊಂಡಗಾಂವ್ ಜಿಲ್ಲೆಯಲ್ಲಿ ಪೊಲೀಸ್ ಮಾಹಿತಿದಾರನಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಮಾವೋವಾದಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ರಾತ್ರಿ ಧನೋರಾ ಪೊಲೀಸ್ ಠಾಣಾ ವ್ಯಾಪ್ತಿಯ ತಿಮ್ಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಹತ್ಯೆಗೀಡಾದ ವ್ಯಕ್ತಿಯನ್ನು ದಿನೇಶ್ ಮಾಂಡವಿ ಎಂದು ಗುರುತಿಸಲಾಗಿದೆ. ಈತ ಮದುವೆಗೆ ಹಾಜರಾಗಿ ಮನೆಗೆ ಹಿಂದಿರುಗುತ್ತಿದ್ದಾಗ ದಾಳಿ ಮಾಡಿದ ಮಾವೋವಾದಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗುಂಡು ಹಾರಿಸಿದ ನಂತರ ಮಾಂಡವಿ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅಲ್ಲಿಂದ ತಪ್ಪಿಸಿಕೊಂಡಿದ್ದಾರೆ. ಆದರೆ, ಕೇಶ್ಕಲ್‌ನ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.
ಮಾಂಡವಿ ವಿಶೇಷ ಗುಪ್ತಚರ ವಿಭಾಗದ ಪೊಲೀಸ್‌ಗೆ ಮಾಹಿತಿದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ದಾಳಿಕೋರರ ಪತ್ತೆಗಾಗಿ ಭದ್ರತಾ ಸಿಬ್ಬಂದಿ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.
Advertisement