ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಮರು ಆಯ್ಕೆ; ವಿಪಕ್ಷ ನಾಯಕನ ಸ್ಥಾನಕ್ಕೆ ಒಪ್ಪಿಗೆ ಸೂಚಿಸದ ರಾಹುಲ್

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶನಿವಾರ ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ.
New Delhi: Congress President Mallikarjun Kharge with party leaders Sonia Gandhi, Rahul Gandhi, Priyanka Gandhi Vadra and others during the extended Congress Working Committee meeting, in New Delhi, Saturday, June 8, 2024.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಪಾಲ್ಗೊಂಡಿದ್ದರು.Kamal Singh. PTI Photo
Updated on

ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶನಿವಾರ ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ.

ಇಂದು ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅವರ ಹೆಸರನ್ನು ಪ್ರಸ್ತಾಪಿಸಿದರು.

ಈ ಪ್ರಸ್ತಾವನೆಯನ್ನು ಗೌರವ್ ಗೊಗೊಯ್, ಕೆ ಸುಧಾಕರನ್ ಮತ್ತು ತಾರಿಕ್ ಅನ್ವರ್ ಅವರು ಅನುಮೋದಿಸಿದ್ದಾರೆ.

77 ವರ್ಷದ ಸೋನಿಯಾ ಗಾಂಧಿ ಅವರು ಫೆಬ್ರವರಿಯಲ್ಲಿ ರಾಜ್ಯಸಭೆಗೆ ಆಯ್ಕೆಯಾದರು. ಇದಕ್ಕೂ ಮೊದಲು, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಸರ್ವಾನುಮತದಿಂದ ಆಯ್ಕೆ ಮಾಡಿತು. ಆದರೆ ರಾಹುಲ್ ಗಾಂಧಿ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಇನ್ನೂ ಒಪ್ಪಿಗೆ ಸೂಚಿಸಿಲ್ಲ. ಈ ಬಗ್ಗೆ ಅವರು "ಶೀಘ್ರದಲ್ಲೇ" ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಪಕ್ಷದ ವರಿಷ್ಠರಿಗೆ ತಿಳಿಸಿದ್ದಾರೆ.

New Delhi: Congress President Mallikarjun Kharge with party leaders Sonia Gandhi, Rahul Gandhi, Priyanka Gandhi Vadra and others during the extended Congress Working Committee meeting, in New Delhi, Saturday, June 8, 2024.
ವಿಪಕ್ಷ ನಾಯಕನ ಸ್ಥಾನಕ್ಕೆ ರಾಹುಲ್ ಗಾಂಧಿ: CWC ಸಭೆಯಲ್ಲಿ ನಿರ್ಣಯ ಅಂಗೀಕಾರ

ಹಲವಾರು ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಅವರಿಗೆ ನೀವು ನಿರ್ಣಾಯಕ ಪಾತ್ರವನ್ನು ವಹಿಸುತ್ತೀರಿ ಮತ್ತು ಅದು ಅಂತಿಮವಾಗಿ ಪಕ್ಷವನ್ನು ಬಲಪಡಿಸುತ್ತದೆ ಎಂದು ಒತ್ತಿಹೇಳುತ್ತಾ ಲೋಕಸಭೆ ಪ್ರತಿಪಕ್ಷ ನಾಯಕನ ಸ್ಥಾನವನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ.

ಇದೇ ವೇಳೆ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷದ ಕಾರ್ಯಕರ್ತರ ಪ್ರಯತ್ನವನ್ನು ಶ್ಲಾಘಿಸಿದ ಸೋನಿಯಾ ಗಾಂಧಿ, "ನೀವು ಅತ್ಯಂತ ಸವಾಲಿನ ಸಂದರ್ಭಗಳಲ್ಲಿ ಕಠಿಣ ಚುನಾವಣೆಯನ್ನು ಎದುರಿಸಿದ್ದೀರಿ. ನೀವು ಅನೇಕ ಅಡೆತಡೆಗಳನ್ನು ದಾಟಿ ತುಂಬಾ ಪರಿಣಾಮಕಾರಿಯಾಗಿ ಪ್ರಚಾರ ಮಾಡಿದ್ದೀರಿ. ನಿಮ್ಮ ಯಶಸ್ಸು ನಮಗೆ ಹೆಚ್ಚಿನ ಉಪಸ್ಥಿತಿಯನ್ನು ನೀಡಿದೆ. ಲೋಕಸಭೆ ಮತ್ತು ಅದರ ಕಾರ್ಯವೈಖರಿಯಲ್ಲಿ ಹೆಚ್ಚು ಪರಿಣಾಮಕಾರಿ ಭಾಗವಹಿಸುವಿಕೆಗೆ ಹೆಚ್ಚಿನ ಶಕ್ತಿಯನ್ನು ನೀಡಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com