'ಸಂಸತ್ತಿನಲ್ಲಿ ನಾನು ನಿಮ್ಮ ಧ್ವನಿಯಾಗಿರುತ್ತೇನೆ': NEET ಆಕಾಂಕ್ಷಿಗಳಿಗೆ Rahul Gandhi ಭರವಸೆ

NEET-UG ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿರುವ ಕಾಂಗ್ರೆಸ್ ಸಂಸದ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ 'ಸಂಸತ್ತಿನಲ್ಲಿ ನಾನು ನಿಮ್ಮ ಧ್ವನಿಯಾಗಿರುತ್ತೇನೆ' ಎಂದು ಭರವಸೆ ನೀಡಿದ್ದಾರೆ.
Rahul Gandhi with students
ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ
Updated on

ನವದೆಹಲಿ: NEET-UG ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿರುವ ಕಾಂಗ್ರೆಸ್ ಸಂಸದ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ 'ಸಂಸತ್ತಿನಲ್ಲಿ ನಾನು ನಿಮ್ಮ ಧ್ವನಿಯಾಗಿರುತ್ತೇನೆ' ಎಂದು ಭರವಸೆ ನೀಡಿದ್ದಾರೆ.

ನೀಟ್-ಯುಜಿ ಪ್ರವೇಶ ಪರೀಕ್ಷೆ ವಿವಾದ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

''ಮೋದಿಯವರು ನೂತನ ಅವಧಿಗೆ ಅಧಿಕಾರ ಸ್ವೀಕರಿಸುವ ಮುನ್ನವೇ ಪರೀಕ್ಷೆಯಲ್ಲಿನ ಅವ್ಯವಹಾರಗಳು 24 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಹತಾಶಗೊಳಿಸಿವೆ. ಸಂಸತ್ತಿನಲ್ಲಿ ನಾನು ನಿಮ್ಮ ಧ್ವನಿಯಾಗುತ್ತೇನೆ ಮತ್ತು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪ್ರಮುಖವಾಗಿ ಎತ್ತುತ್ತೇನೆ ’ಎಂದು ಅವರು ಟ್ವೀಟ್ ಮಾಡಿದ್ದಾರೆ.

Rahul Gandhi with students
1,600 NEET ಅಭ್ಯರ್ಥಿಗಳ ಫಲಿತಾಂಶ ಮರುಪರಿಶೀಲಿಸಲು ಸಮಿತಿ ರಚನೆ; ಪ್ರವೇಶ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರುವುದಿಲ್ಲ: NTA ಸ್ಪಷ್ಟನೆ

ಅಂತೆಯೇ ಒಂದೇ ಪರೀಕ್ಷಾ ಕೇಂದ್ರದಿಂದ ಆರು ವಿದ್ಯಾರ್ಥಿಗಳು ಗರಿಷ್ಠ ಅಂಕಗಳೊಂದಿಗೆ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದಿದ್ದು, ಹಲವರು ತಾಂತ್ರಿಕವಾಗಿ ಸಾಧ್ಯವಿಲ್ಲದ ಅಂಕಗಳನ್ನು ಪಡೆದಿದ್ದಾರೆ. ಆದರೆ ಸರ್ಕಾರವು ಪ್ರಶ್ನೆಪತ್ರಿಕೆ ಸೋರಿಕೆಯನ್ನು ನಿರಂತರವಾಗಿ ನಿರಾಕರಿಸುತ್ತಿದೆ.

ಶಿಕ್ಷಣ ಮಾಫಿಯಾ ಮತ್ತು ಸರ್ಕಾರಿ ಯಂತ್ರದೊಂದಿಗೆ ಶಾಮೀಲಾಗಿ ನಡೆಯುತ್ತಿರುವ ಈ ‘ಪ್ರಶ್ನೆಪತ್ರಿಕೆ ಸೋರಿಕೆ ಉದ್ಯಮ’ವನ್ನು ಎದುರಿಸಲು ಕಾಂಗ್ರೆಸ್ ಸದೃಢ ಯೋಜನೆಯನ್ನು ಹೊಂದಿತ್ತು. ಕಾನೂನು ತರುವ ಮೂಲಕ ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಮುಕ್ತಿ ನೀಡುವುದಾಗಿ ನಾವು ನಮ್ಮ ಪ್ರಣಾಳಿಕೆಯಲ್ಲಿ ವಾಗ್ದಾನ ಮಾಡಿದ್ದೆವು ಎಂದು ಹೇಳಿದ್ದಾರೆ.

ಯುವಜನರು ಇಂಡಿಯಾ ಮೈತ್ರಿಕೂಟದಲ್ಲಿ ನಂಬಿಕೆ ಇಟ್ಟಿದ್ದಾರೆ. ಇದು ಹಾಲಿ ಚುನಾವಣೆಯಲ್ಲಿ ಸ್ಪಷ್ಟವಾಗಿದೆ. ಅವರ ಧ್ವನಿಗಳನ್ನು ದಮನಿಸಲು ನಾವು ಅವಕಾಶ ನೀಡುವುದಿಲ್ಲ ಎಂದೂ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com