
ನವದೆಹಲಿ: ದೇಶದ ಪ್ರಧಾನಿಯಾಗಿ ಮೋದಿ ಅವರ ಪಟ್ಟಾಭಿಷೇಕಕ್ಕೆ ಸಕಲ ತಯಾರಿ ನಡೆಯುತ್ತಿದ್ದು, ರಾಷ್ಟ್ರ ರಾಜಧಾನಿಯಾದ್ಯಂತ ಮೋದಿ ಭಾವಚಿತ್ರವುಳ್ಳ ಫೋಸ್ಟರ್ ಗಳು, ಬ್ಯಾನರ್ ಗಳು ರಾರಾಜಿಸುತ್ತಿವೆ. ಜವಹರ್ ಲಾಲ್ ನೆಹರೂ ನಂತರ ದೇಶದಲ್ಲಿ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮಾಣ ವಚನ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 1, 100 ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಕೆಲವೊಂದು ಮಾರ್ಗದಲ್ಲಿ ಸಾರ್ವಜನಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.
ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮ್ ಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಝೀಝು, ಬಾಂಗ್ಲಾದೇಶ ಪ್ರಧಾನಿ ಶೇಕ್ ಹಸೀನಾ, ಮಾರಿಷಸ್ ಪ್ರಧಾನಿ ಪ್ರವೀದ್ ಕುಮಾರ್ ಜಗುನಾಥ್, ನೇಪಾಳ ಪ್ರಧಾನಿ ಪುಷ್ಪ ಕಮಾಲ್ ದಹಾಲ್ ಪ್ರಚಂಡ, ಭೂತಾನ್ ಪ್ರಧಾನಿ ಭಾಗವಹಿಸುತ್ತಿರುವುದಾಗಿ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ದೇಶ, ವಿದೇಶದ ಗಣ್ಯರಲ್ಲದೇ, ಸಂಸತ್ ನಿರ್ಮಾಣ ಮಾಡಿದ 250 ಕ್ಕೂ ಹೆಚ್ಚು ಕಾರ್ಮಿಕರು, ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಹತ್ವದ ಕಾರ್ಯಕ್ರಮದಲ್ಲಿ ನೆರೆಹೊರೆಯವರಿಗೆ ಮೊದಲ ಆದ್ಯತೆ ಮತ್ತು ಸಾಗರ್ ದೂರದೃಷ್ಟಿಗೆ ಪ್ರಾಮುಖ್ಯತೆ ನೀಡಲಾಗಿದ್ದು, ವಿದೇಶಿ ಗಣ್ಯರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಔತಟ ಕೂಟ ಆಯೋಜಿಸಿರುವುದಾಗಿ ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.
ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಇಂಡಿಯಾ ಬಣ 292 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.
Advertisement