ಮಣಿಪುರ ಸಿಎಂ ಬೆಂಗಾವಲು ವಾಹನದ ಮೇಲೆ ಶಂಕಿತ ಉಗ್ರಗಾಮಿಗಳ ದಾಳಿ, ಓರ್ವ ಗಾಯ

ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಲಾಗಿದೆ. ಶಂಕಿತ ಉಗ್ರಗಾಮಿಗಳು ಸೋಮವಾರ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಸಿಎಂ ಬಿರೇನ್ ಸಿಂಗ್ ಅವರ ಭದ್ರತಾ ಬೆಂಗಾವಲು ವಾಹನದ ಮೇಲೆ ಮೇಲೆ ಹೊಂಚುದಾಳಿ ನಡೆಸಿದ್ದು, ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಎನ್ . ಬಿರೇನ್ ಸಿಂಗ್
ಎನ್ . ಬಿರೇನ್ ಸಿಂಗ್
Updated on

ಇಂಫಾಲ್: ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಲಾಗಿದೆ. ಶಂಕಿತ ಉಗ್ರಗಾಮಿಗಳು ಸೋಮವಾರ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಸಿಎಂ ಬಿರೇನ್ ಸಿಂಗ್ ಅವರ ಭದ್ರತಾ ಬೆಂಗಾವಲು ವಾಹನದ ಮೇಲೆ ಮೇಲೆ ಹೊಂಚುದಾಳಿ ನಡೆಸಿದ್ದು, ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಾವಲು ಪಡೆ ಹಿಂಸಾಚಾರ ಪೀಡಿತ ಜಿರಿಬಾಮ್ ಜಿಲ್ಲೆಗೆ ತೆರಳುತ್ತಿತ್ತು ಎನ್ನಲಾಗಿದೆ

ಭದ್ರತಾ ಪಡೆ ವಾಹನಗಳ ಮೇಲೆ ಗುಂಡಿನ ದಾಳಿ ನಡೆಸಿದಾಗ ಮುಖ್ಯಮಂತ್ರಿ ಇರಲಿಲ್ಲ. ತಕ್ಷಣ ಪ್ರತಿದಾಳಿ ನಡೆಸಿರುವುದಾಗಿ ಪೊಲೀಸರು ಹೇಳಿದ್ದಾರೆ. ರಾಷ್ಟ್ರೀಯ ಹೆದ್ದಾರಿ -53 ರ ಉದ್ದಕ್ಕೂ ಕೋಟ್ಲೆನ್ ಗ್ರಾಮದ ಬಳಿ ಇನ್ನೂ ಶೂಟೌಟ್ ನಡೆಯುತ್ತಿದೆ. ದಾಳಿಯ ವೇಳೆ ಕನಿಷ್ಠ ಒಬ್ಬ ಸಿಬ್ಬಂದಿಗೆ ಬುಲೆಟ್ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಎನ್ . ಬಿರೇನ್ ಸಿಂಗ್
ಮಣಿಪುರ: ಪೊಲೀಸ್ ಔಟ್‌ಪೋಸ್ಟ್‌, ಹಲವರು ಮನೆಗಳಿಗೆ ಉಗ್ರಗಾಮಿಗಳಿಂದ ಬೆಂಕಿ!

ದೆಹಲಿಯಿಂದ ಇಂಫಾಲ್‌ಗೆ ತೆರಳುತ್ತಿದ್ದ ಸಿಎಂ ಬಿರೇನ್ ಸಿಂಗ್, ಜಿಲ್ಲೆಯ ಪರಿಸ್ಥಿತಿಯನ್ನು ಪರಿಶೀಲಿಸಲು ಜಿರಿಬಾಮ್‌ಗೆ ಭೇಟಿ ನೀಡಲು ಯೋಜಿಸಿದ್ದರು" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶಂಕಿತ ಉಗ್ರಗಾಮಿಗಳು ಶನಿವಾರ ಜಿರಿಬಾಮ್‌ನಲ್ಲಿ ಎರಡು ಪೊಲೀಸ್ ಔಟ್‌ಪೋಸ್ಟ್, ಮತ್ತು ಕನಿಷ್ಠ 70 ಮನೆಗಳಿಗೆ ಬೆಂಕಿ ಹಚ್ಚಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com