ನಾಗ್ಪುರ: ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ, ಐವರು ಕಾರ್ಮಿಕರ ಸಾವು!

ಮಹಾರಾಷ್ಟ್ರದ ನಾಗ್ಪುರ ಬಳಿಯ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಫೋಟ ಸಂಭವಿಸಿದ ಸ್ಥಳದ ಚಿತ್ರ
ಸ್ಫೋಟ ಸಂಭವಿಸಿದ ಸ್ಥಳದ ಚಿತ್ರ
Updated on: 

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಬಳಿಯ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಗ್ಪುರದಿಂದ 25 ಕಿ.ಮೀ. ದೂರದಲ್ಲಿರುವ ಹಿಂಗ್ನಾ ಪೊಲೀಸ್ ಠಾಣೆ ವ್ಯಾಪ್ತಿಯ ಧಮ್ನಾ ಗ್ರಾಮದ ಚಾಮುಂಡಿ ಸ್ಫೋಟಕ ಪ್ರೈವೇಟ್ ಲಿಮಿಟೆಡ್‌ನಲ್ಲಿ ಈ ಘಟನೆ ನಡೆದಿದೆ.

ಸ್ಫೋಟ ಸಂಭವಿಸಿದ ಸ್ಥಳದ ಚಿತ್ರ
Viral Video: ಪೆಟ್ರೋಲ್ ಬಂಕ್ ನಲ್ಲಿ ಲಾರಿ ಡೀಸೆಲ್ ಟ್ಯಾಂಕ್ ಸ್ಫೋಟ, ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

ಸ್ಫೋಟದಲ್ಲಿ ಕನಿಷ್ಠ ಐವರು ಕಾರ್ಮಿಕರು ಸಾವನ್ನಪ್ಪಿದ್ದು, ಇಡೀ ಫ್ಯಾಕ್ಟರಿ ಬೆಂಕಿಯಿಂದ ಸುಟ್ಟು ಹೋಗಿದೆ ಎಂದು ನಾಗ್ಪುರ ಪೊಲೀಸ್ ಕಮಿಷನರ್ ರವೀಂದ್ರ ಸಿಂಘಾಲ್ ಸುದ್ದಿಗಾರರಿಗೆ ತಿಳಿಸಿದರು. ಕಾರ್ಮಿಕರು ಸ್ಫೋಟಕಗಳನ್ನು ಪ್ಯಾಕ್ ಮಾಡುತ್ತಿದ್ದಾಗ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com