
ಗ್ಯಾಂಗ್ಟಕ್: ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರ ಪತ್ನಿ ಕೃಷ್ಣ ಕುಮಾರಿ ರೈ ಅವರು ಶಾಸಕಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ಗುರುವಾರ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಸಿಎಂ ಪತ್ನಿಯ ಹಠಾತ್ ನಿರ್ಧಾರದ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ.
ಇತ್ತೀಚೆಗಷ್ಟೇ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕೃಷ್ಣ ಕುಮಾರಿ ಅವರು, ನಾಮ್ಚಿ-ಸಿಂಘಿತಂಗ್ ಕ್ಷೇತ್ರದಿಂದ ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್(ಎಸ್‌ಡಿಎಫ್) ಅಭ್ಯರ್ಥಿ ಬಿಮಲ್ ರೈ ಅವರನ್ನು ಸೋಲಿಸಿಸಿದ್ದರು.
ಕೃಷ್ಣ ಕುಮಾರಿ ರೈ ಅವರ ರಾಜೀನಾಮೆಯನ್ನು ಸ್ಪೀಕರ್ ಎಂಎನ್ ಶೆರ್ಪಾ ಅಂಗೀಕರಿಸಿದ್ದಾರೆ ಎಂದು ಸಿಕ್ಕಿಂ ವಿಧಾನಸಭೆ ಕಾರ್ಯದರ್ಶಿ ಲಲಿತ್ ಕುಮಾರ್ ಗುರುಂಗ್ ಅವರು ಹೇಳಿದ್ದಾರೆ.
ಈ ಬೆಳವಣಿಗೆಗೆ ಸಂಬಂಧಿಸಿದಂತೆ ಕೃಷ್ಣ ಕುಮಾರ್ ಅಥವಾ ಆಡಳಿತ ಪಕ್ಷ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ನಾಯಕರು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸಿಕ್ಕಿಂ ಸಿಎಂ ತಮಾಂಗ್ ಅವರು ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡು ಅವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲು ತೆರಳಿದ್ದಾರೆ.
Advertisement