
ಮುಂಬೈ: ಜಮ್ಮು ಮತ್ತು ಕಾಶ್ಮೀರದಲ್ಲಿ ಸರಣಿ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಶಿವಸೇನೆ(ಯುಬಿಟಿ) ನಾಯಕರೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆದ ಎ ಗುಂಪಿನ ಪಂದ್ಯದಲ್ಲಿ ಭಾರತ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಜಯಗಳಿಸಿತು. ಉಭಯ ತಂಡಗಳು ಸೆಮಿಫೈನಲ್ ಅಥವಾ ಫೈನಲ್‌ನಲ್ಲಿ ಮುಖಾಮುಖಿಯಾಗಬಹುದು.
ಕಾಶ್ಮೀರದಲ್ಲಿ ಇತ್ತೀಚಿಗೆ ಸರಣಿ ಉಗ್ರ ದಾಳಿ ನಡೆದ ಹಿನ್ನೆಲೆಯಲ್ಲಿ ಭಾರತ - ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯವನ್ನು ರದ್ದುಗೊಳಿಸಬೇಕು ಎಂದು ಶಿವಸೇನೆ(ಯುಬಿಟಿ)ಯ ವಕ್ತಾರ ಆನಂದ್ ದುಬೆ ಅವರು ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಕ್ರೀಡಾ ಸಚಿವರು ಮತ್ತು ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಎರಡು ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ ಕಥುವಾ ಮತ್ತು ದೋಡಾ ಜಿಲ್ಲೆಗಳಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ಗಳಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿದ್ದರು ಮತ್ತು ಆರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು.
Advertisement