ಜಮ್ಮು-ಕಾಶ್ಮೀರ ಭದ್ರತೆ ಪರಿಶೀಲಿಸಿದ ಗೃಹ ಸಚಿವ ಅಮಿತ್ ಶಾ; ಜೂನ್ 16 ರಂದು ಉನ್ನತ ಮಟ್ಟದ ಸಭೆ

ಯಾತ್ರಿಗಳಿದ್ದ ಬಸ್ ಮೇಲಿನ ಗುಂಡಿನ ದಾಳಿ ಸೇರಿದಂತೆ ಹಲವು ಉಗ್ರರ ಘಟನೆಗಳಿಗೆ ಸಾಕ್ಷಿಯಾದ ಜಮ್ಮು-ಕಾಶ್ಮೀರದಲ್ಲಿನ ಭದ್ರತೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪರಿಶೀಲಿಸಿದರು ಎಂದು ಮೂಲಗಳು ಹೇಳಿವೆ.
ಅಮಿತ್ ಶಾ
ಅಮಿತ್ ಶಾ

ನವದೆಹಲಿ: ಯಾತ್ರಿಗಳಿದ್ದ ಬಸ್ ಮೇಲಿನ ಗುಂಡಿನ ದಾಳಿ ಸೇರಿದಂತೆ ಹಲವು ಉಗ್ರರ ಘಟನೆಗಳಿಗೆ ಸಾಕ್ಷಿಯಾದ ಜಮ್ಮು-ಕಾಶ್ಮೀರದಲ್ಲಿನ ಭದ್ರತೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪರಿಶೀಲಿಸಿದರು ಎಂದು ಮೂಲಗಳು ಹೇಳಿವೆ.

ಜೂನ್ 16 ರಂದು ಉನ್ನತ ಮಟ್ಟದ ಸಭೆ ಕರೆದಿದ್ದು, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಾಲ್, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಸೇನೆ ಹಾಗೂ ಸಿಆರ್ ಪಿಎಫ್ ನ ಉನ್ನತ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಭಾನುವಾರದ ಸಭೆಯಲ್ಲಿ,ಜೂನ್ 29 ರಂದು ಆರಂಭವಾಗಲಿರುವ ವಾರ್ಷಿಕ ಅಮರನಾಥ ಯಾತ್ರೆಯ ಸಿದ್ಧತೆಗಳನ್ನು ಸಹ ಅಮಿತ್ ಶಾ ಪರಿಶೀಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಸದ್ಯ ಇರುವ ಪರಿಸ್ಥಿತಿ ಮತ್ತು ಭಯೋತ್ಪಾದನಾ ಘಟನೆಗಳ ಬಳಿಕ ತೆಗೆದುಕೊಂಡ ಕ್ರಮಗಳ ಬಗ್ಗೆ ಗೃಹ ಸಚಿವರಿಗೆ ವಿವರಿಸಲಾಗಿದೆ ಎಂದು ತಿಳಿದುಬಂದಿದೆ. ಜಮ್ಮು ಮತ್ತು ಕಾಶ್ಮೀರದ ರಿಯಾಸಿ, ಕಥುವಾ ಮತ್ತು ದೋಡಾ ಜಿಲ್ಲೆಗಳಲ್ಲಿ ಕೆಲವು ದಿನಗಳಿಂದ ಭಯೋತ್ಪಾದಕರು ದಾಳಿ ನಡೆಸಿದ್ದು, ಒಂಬತ್ತು ಯಾತ್ರಿಕರು ಮತ್ತು ಒಬ್ಬ ಸಿಆರ್‌ಪಿಎಫ್ ಯೋಧ ಸಾವನ್ನಪ್ಪಿದ್ದಾರೆ ಮತ್ತು ಏಳು ಭದ್ರತಾ ಸಿಬ್ಬಂದಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

ಅಮಿತ್ ಶಾ
ಕಾಶ್ಮೀರದಲ್ಲಿ ಉಗ್ರರ ದಮನಕ್ಕೆ ಸಶಸ್ತ್ರ ಪಡೆಗಳ ಸಂಪೂರ್ಣ ಶಕ್ತಿ ಬಳಸುವಂತೆ ಪ್ರಧಾನಿ ಮೋದಿ ಆದೇಶ

ಭಾನುವಾರದ ಸಭೆಯಲ್ಲಿ, ಜೂನ್ 29 ರಂದು ಆರಂಭವಾಗಲಿರುವ ವಾರ್ಷಿಕ ಅಮರನಾಥ ಯಾತ್ರೆಯ ಸಿದ್ಧತೆಗಳನ್ನು ಸಹ ಅಮಿತ್ ಶಾ ಪರಿಶೀಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಸದ್ಯ ಇರುವ ಪರಿಸ್ಥಿತಿ ಮತ್ತು ಭಯೋತ್ಪಾದನಾ ಘಟನೆಗಳ ಬಳಿಕ ತೆಗೆದುಕೊಂಡ ಕ್ರಮಗಳ ಬಗ್ಗೆ ಗೃಹ ಸಚಿವರಿಗೆ ವಿವರಿಸಲಾಗಿದೆ ಎಂದು ತಿಳಿದುಬಂದಿದೆ. ಜಮ್ಮು ಮತ್ತು ಕಾಶ್ಮೀರದ ರಿಯಾಸಿ, ಕಥುವಾ ಮತ್ತು ದೋಡಾ ಜಿಲ್ಲೆಗಳಲ್ಲಿ ಕೆಲವು ದಿನಗಳಿಂದ ಭಯೋತ್ಪಾದಕರು ದಾಳಿ ನಡೆಸಿದ್ದು, ಒಂಬತ್ತು ಯಾತ್ರಿಕರು ಮತ್ತು ಒಬ್ಬ ಸಿಆರ್‌ಪಿಎಫ್ ಯೋಧ ಸಾವನ್ನಪ್ಪಿದ್ದಾರೆ ಮತ್ತು ಏಳು ಭದ್ರತಾ ಸಿಬ್ಬಂದಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com